ಚೆಫನ್ಯ 3:19 - ಪರಿಶುದ್ದ ಬೈಬಲ್19 ಆ ಸಮಯದಲ್ಲಿ, ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು. ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರೆದುಕೊಂಡು ಬರುವೆನು. ನಾನು ಅವರನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ಅವರನ್ನು ಹೊಗಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ದಿನದಲಿ ಇಂತೆನ್ನುವನು: “ದಂಡಿಸುವೆನು ನಿನ್ನನು ಬಾಧಿಸಿದವರನು ಉದ್ಧರಿಸುವೆನು ನಿನ್ನಲ್ಲಿ ಕುಂಟುವವರನು ಒಂದುಗೂಡಿಸುವೆನು ಚದರಿಹೋದವರನು ಬರಮಾಡುವೆನು ಅವಮಾನಿತರಿಗೆ ಸನ್ಮಾನವನು ಗಿಟ್ಟಿಸುವೆನು ನಿಮಗೆ ಜಗದಲ್ಲೆಲ್ಲ ಕೀರ್ತಿಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ಉದ್ಧರಿಸುವೆನು, ಚದರಿಸಲ್ಪಟ್ಟವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರಕೀರ್ತಿಗಳನ್ನು ಉಂಟುಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆ ಕಾಲದಲ್ಲಿ ನಿನ್ನನ್ನು ಪೀಡಿಸುವವರನ್ನೆಲ್ಲಾ ದಂಡಿಸುವೆನು, ಕುಂಟಾದದ್ದನ್ನು ರಕ್ಷಿಸಿ, ಚದರಿಹೋದವರನ್ನು ಕೂಡಿಸುವೆನು; ಅವರು ಅವಮಾನ ಹೊಂದಿದ ದೇಶಗಳಲ್ಲೆಲ್ಲಾ ಅವರಿಗೆ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು. ಅಧ್ಯಾಯವನ್ನು ನೋಡಿ |
ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.
ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ: