4 ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.
“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.
“ಆದರೆ ಯಾಜಕರೇ, ನೀವು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿ ಬಿಟ್ಟಿರಿ. ಅನೇಕ ಜನರು ತಪ್ಪು ದಾರಿಯಲ್ಲಿ ಹೋಗುವಂತೆ ಮಾಡಲು ನೀವು ಉಪದೇಶವನ್ನು ಬಳಸಿಕೊಂಡಿರಿ. ಲೇವಿಯೊಂದಿಗೆ ಮಾಡಿದ ಒಡಂಬಡಿಕೆಯನ್ನು ನೀವು ಹಾಳುಮಾಡಿಬಿಟ್ಟಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”
ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.
ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.
ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.
ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.
ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.
ಏಲಿಯು ಬಹಳ ವೃದ್ಧನಾದನು. ತನ್ನ ಗಂಡುಮಕ್ಕಳು ಶೀಲೋವಿನಲ್ಲಿ ಇಸ್ರೇಲರೊಂದಿಗೆ ನಡೆದುಕೊಳ್ಳುತ್ತಿರುವ ರೀತಿಯನ್ನು ಮತ್ತು ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿರುವ ಸ್ತ್ರೀಯರೊಡನೆ ಕೂಡುತ್ತಿರುವುದನ್ನು ಅವನು ಕೇಳುತ್ತಿದ್ದನು.
ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಆ ಬೆಳ್ಳಿಯು ಬಾಳ್‌ಬೆರೀತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದುಕೊಳ್ಳಲು ಅವನು ಈ ಬೆಳ್ಳಿಯನ್ನು ಬಳಸಿಕೊಂಡನು. ಈ ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು.
ಯೆಹೂದದ ಮತ್ತು ಜೆರುಸಲೇಮಿನ ನಾಯಕರು, ಪ್ರಮುಖ ಅಧಿಕಾರಿಗಳು, ಯಾಜಕರು ಮತ್ತು ದೇಶದ ಸಕಲ ಜನರು ಇವರೆಲ್ಲ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಾಗ ಕರುವಿನ ಶರೀರದ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.
“ಯಾಜಕರು ಜನರಿಗೆ ಪವಿತ್ರ ವಸ್ತುಗಳ ಮತ್ತು ಪವಿತ್ರವಲ್ಲದ ವಸ್ತುಗಳ ಬಗ್ಗೆ ಉಪದೇಶಿಸಬೇಕು. ಒಬ್ಬನನ್ನು ಅಶುದ್ಧನನ್ನಾಗಿ ಮಾಡುವಂಥವುಗಳ ಬಗ್ಗೆ ಇರುವ ನಿಯಮಗಳನ್ನು ಅವರು ಜನರಿಗೆ ಉಪದೇಶಿಸಬೇಕು.
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.
ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.