ಚೆಫನ್ಯ 3:5 - ಪರಿಶುದ್ದ ಬೈಬಲ್5 ಆದರೆ ದೇವರು ಇನ್ನೂ ಆ ನಗರದಲ್ಲಿದ್ದಾನೆ. ಅವರಿಗೆ ಇನ್ನೂ ಒಳ್ಳೆಯದನ್ನೇ ಮಾಡುತ್ತಿದ್ದಾನೆ. ಆತನು ತಪ್ಪು ಕಾರ್ಯಗಳನ್ನು ಮಾಡುವವನಲ್ಲ. ತನ್ನ ಜನರಿಗೆ ಸಹಾಯ ಮಾಡುತ್ತಿರುತ್ತಾನೆ. ಪ್ರತಿ ದಿನವೂ ಸರಿಯಾದ ತೀರ್ಮಾನ ಮಾಡಲು ತನ್ನ ಜನರಿಗೆ ಸಹಾಯ ಮಾಡುತ್ತಾನೆ. ಆದರೆ ಆ ದುಷ್ಟಜನರು ತಮ್ಮ ದುಷ್ಟತನಕ್ಕಾಗಿ ನಾಚಿಕೆಪಡುತ್ತಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದರ ಮಧ್ಯೆ ನೆಲೆಗೊಂಡಿರುವ ಯೆಹೋವನು ನ್ಯಾಯಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಬೆಳಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು. ಅಧ್ಯಾಯವನ್ನು ನೋಡಿ |
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!