ಚೆಫನ್ಯ 3:6 - ಪರಿಶುದ್ದ ಬೈಬಲ್6 ದೇವರು ಹೀಗೆನ್ನುತ್ತಾನೆ, “ನಾನು ಇಡೀ ಜನಾಂಗಗಳನ್ನು ನಾಶಮಾಡಿದ್ದೇನೆ. ಅವರ ಬುರುಜುಗಳನ್ನು ನಾಶಮಾಡಿ, ಅವರ ರಸ್ತೆಗಳಲ್ಲಿ ಯಾರೂ ನಡೆಯದ ಹಾಗೆ ಮಾಡಿರುತ್ತೇನೆ. ಅವರ ನಗರಗಳು ನಿರ್ಜನವಾಗಿವೆ. ಯಾರೂ ಅಲ್ಲಿ ವಾಸಮಾಡುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ಇಂತೆನ್ನುತ್ತಾನೆ, “ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೋಟೆ ಕೊತ್ತಲುಗಳು ಪಾಳು ಬಿದ್ದವು; ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ; ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಾಮವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ರಾಷ್ಟ್ರಗಳನ್ನು ಧ್ವಂಸಮಾಡಿದ್ದೇನೆ. ಅವುಗಳ ಕೋಟೆಕೊತ್ತಲಗಳು ಪಾಳುಬಿದ್ದಿವೆ. ಅವುಗಳ ಹಾದಿಬೀದಿಗಳನ್ನು ನಿರ್ಜನವಾಗಿಸಿದ್ದೇನೆ. ಯಾರೂ ಅವುಗಳಲ್ಲಿ ಹಾದುಹೋಗುವಂತಿಲ್ಲ. ಅವರ ಪಟ್ಟಣಗಳು ನಾಶವಾಗಿವೆ; ನಿರ್ನಿವಾಸವಾಗಿ ಶೂನ್ಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 [ಯೆಹೋವನು ಇಂತೆನ್ನುತ್ತಾನೆ - ] ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೊತ್ತಲಗಳು ಪಾಳುಬಿದ್ದವು, ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ, ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಿವಾಸವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ. ಅವುಗಳ ಗೋಪುರಗಳು ಹಾಳಾಗಿವೆ. ಅವುಗಳ ಬೀದಿಗಳನ್ನು ಯಾರೂ ಹಾದುಹೋಗದ ಹಾಗೆ ಹಾಳುಮಾಡಿದ್ದೆನೆ. ಅವುಗಳ ಪಟ್ಟಣಗಳು ನಾಶವಾದವು. ಹೀಗೆ ಅಲ್ಲಿ ಯಾವನೂ ಇರುವುದಿಲ್ಲ; ಯಾವ ಮನುಷ್ಯನೂ ಅಲ್ಲಿ ವಾಸಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿ |