ಚೆಫನ್ಯ 3:7 - ಪರಿಶುದ್ದ ಬೈಬಲ್7 ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು” ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇದರಿಂದಲಾದರೂ ಜೆರುಸಲೇಮ್ ನಗರ ನನಗೆ ಭಯಪಡುವುದು, ನಾನು ಕಲಿಸಿದ ಪಾಠವನ್ನು ಎಂದಿಗೂ ಮರೆಯದು’ ಎಂದುಕೊಂಡೆ. ಆದರೆ ಅದರ ನಿವಾಸಿಗಳು ತಮ್ಮ ನಡತೆಯನ್ನು ಕೆಡಿಸಿಕೊಳ್ಳಲು ಮತ್ತಷ್ಟು ಕಾತರರಾದರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 [ಇದರಿಂದ, ಯೆರೂಸಲೇಮೇ,] ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣೆಗೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ [ತಗಲದು] ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ‘ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವೆ,’ ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ನಾಶವಾಗುವುದಿಲ್ಲ. ಆದರೆ ಅವರು ಬೇಗನೆ ಎದ್ದು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು. ಅಧ್ಯಾಯವನ್ನು ನೋಡಿ |