ಚೆಫನ್ಯ 3:9 - ಪರಿಶುದ್ದ ಬೈಬಲ್9 ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಎಲ್ಲರು ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು. ಅವರೆಲ್ಲರೂ ಯೆಹೋವ ದೇವರ ಹೆಸರಿನಿಂದ ಮೊರೆಯಿಡುವರು. ಏಕಮನಸ್ಸಿನಿಂದ ಆತನಿಗೆ ಸೇವೆಮಾಡುವರು. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.