Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:1 - ಪರಿಶುದ್ದ ಬೈಬಲ್‌

1 ಪರ್ಶಿಯಾದಲ್ಲಿ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಬೆರೆಕ್ಯನ ಮಗನಾದ ಜೆಕರ್ಯನಿಗೆ ಯೆಹೋವನಿಂದ ಸಂದೇಶವು ದೊರಕಿತು. ಬೆರೆಕ್ಯನು ಪ್ರವಾದಿಯಾದ ಇದ್ದೋವಿನ ಮಗನು. ಇದು ಆತನ ಸಂದೇಶ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಡೇರಿಯಸನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಸರ್ವೇಶ್ವರನಿಂದ ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂದ ದೈವವಾಣಿಯಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪರ್ಷಿಯಾದ ಅರಸ ದಾರ್ಯಾವೆಷನ ಎರಡನೆಯ ವರ್ಷ, ಎಂಟನೆಯ ತಿಂಗಳಿನಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:1
17 ತಿಳಿವುಗಳ ಹೋಲಿಕೆ  

ಇದ್ದೋ, ಗಿನ್ನೆತೋನ್, ಅಬೀಯ,


ಹೇಬೆಲನನ್ನು ಕೊಂದದ್ದಕ್ಕಾಗಿಯೂ ಜಕರೀಯನನ್ನು ಕೊಂದದ್ದಕ್ಕಾಗಿಯೂ ನಿಮಗೆ ದಂಡನೆಯಾಗುವುದು. ಜಕರೀಯನನ್ನು ಯಜ್ಞವೇದಿ ಮತ್ತು ದೇವಾಲಯದ ನಡುವೆ ಕೊಲ್ಲಲಾಯಿತು. ಹೌದು, ಅವರೆಲ್ಲರ ಕೊಲೆಗಳಿಗಾಗಿ ಈಗ ಜೀವಿಸುತ್ತಿರುವ ನಿಮಗೆ ದಂಡನೆ ಆಗುವುದು.


“ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.


ಪರ್ಶಿಯದ ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೇ ವರ್ಷದ ಒಂಭತ್ತನೇ ತಿಂಗಳಿನ (ಕಿಸ್ಲೇವ್) ನಾಲ್ಕನೇ ದಿವಸದಲ್ಲಿ ಯೆಹೋವನ ಸಂದೇಶವನ್ನು ಜೆಕರ್ಯನು ಹೊಂದಿದನು.


ಪರ್ಶಿಯದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೇ ತಿಂಗಳಿನ (ಶೆಬಾಟ್) ಇಪ್ಪತ್ತನಾಲ್ಕನೆಯ ದಿವಸ ಜೆಕರ್ಯನು ಯೆಹೋವನಿಂದ ಇನ್ನೊಂದು ಸಂದೇಶವನ್ನು ಪಡೆದನು. ಈತನು ಪ್ರವಾದಿಯಾದ ಇದ್ದೋವಿನ ಮಗನಾದ ಬೆರೆಕ್ಯನ ಮಗನು. ಆ ಸಂದೇಶವು ಹೀಗಿತ್ತು.


ಜೆರುಸಲೇಮಿನಲ್ಲಿ ಯೆಹೋವನ ಆಲಯದ ಕಾರ್ಯವು ನಿಂತಿತು. ಪರ್ಶಿಯ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ತನಕ ಕೆಲಸವು ಮುಂದುವರೆಯಲಿಲ್ಲ.


ಪರ್ಶಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಂದು ಯೆಹೋವನ ಸಂದೇಶವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು.


ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:


ಇದ್ದೋವಿನ ಕುಟುಂಬದ ನಾಯಕ ಜೆಕರ್ಯ, ಗಿನ್ನೆತೋನನ ಕುಟುಂಬದ ನಾಯಕ ಮೆಷುಲ್ಲಾಮ್.


ಒಂಭತ್ತನೇ ತಿಂಗಳ ಇಪ್ಪತ್ನಾಲ್ಕನೆಯ ದಿವಸದಲ್ಲಿ ಇನ್ನೊಂದು ಸಂದೇಶವು ಹಗ್ಗಾಯನಿಗೆ ಯೆಹೋವನಿಂದ ಬಂದಿತು. ಇದೇ ಆ ಸಂದೇಶ:


ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸದಲ್ಲಿ ಕಟ್ಟುವ ಕಾರ್ಯವನ್ನು ಪ್ರಾರಂಭಿಸಿದರು.


ಆ ಸಮಯಗಳಲ್ಲಿ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿದ್ದರು. ಯೆಹೂದ ಪ್ರಾಂತ್ಯದಲ್ಲಿದ್ದ ಮತ್ತು ಜೆರುಸಲೇಮಿನಲ್ಲಿದ್ದ ಯೆಹೂದ್ಯರನ್ನು ಅವರು ಪ್ರೋತ್ಸಾಹಿಸಿದರು.


ಆಗ ತಿರುಗಿ ನಾನು ಯೆಹೋವನಿಂದ ಸಂದೇಶವನ್ನು ಪಡಕೊಂಡೆನು.


ಹಗ್ಗಾಯನಿಗೆ ಮತ್ತೆ ಯೆಹೋವನಿಂದ ಸಂದೇಶವು ಬಂದಿತು. ಹಗ್ಗಾಯನು ಈ ಸಂದೇಶವನ್ನು ತಿಳಿಸಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು