Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:10 - ಪರಿಶುದ್ದ ಬೈಬಲ್‌

10 ಆಗ ಸುಗಂಧ ಮರಗಳ ಬಳಿ ನಿಂತಿದ್ದ ಮನುಷ್ಯನು, “ಈ ಕುದುರೆಗಳು ಭೂಮಿಯ ಮೇಲೆ ಅತ್ತಿತ್ತ ತಿರುಗಾಡುವಂತೆ ಯೆಹೋವನು ಕಳುಹಿಸಿದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೂಡಲೆ ಸುಗಂಧ ವೃಕ್ಷಗಳ ನಡುವೆ ಇದ್ದವನು: “ಇವರು ಲೋಕದ ವೀಕ್ಷಣಾರ್ಥವಾಗಿ ದೇವರಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು - ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು, “ಇವರು ಭೂಮಿಯ ಸುತ್ತಲೂ ನಡೆದಾಡುವುದಕ್ಕೆ ಯೆಹೋವ ದೇವರಿಂದ ಕಳುಹಿಸಲಾದವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:10
13 ತಿಳಿವುಗಳ ಹೋಲಿಕೆ  

ಆಗ ಯೆಹೋವನ ದೂತನೊಂದಿಗೆ ಆ ಕುದುರೆಗಳು ಮಾತನಾಡುತ್ತಾ, “ನಾವು ಭೂಮಿಯ ಮೇಲೆ ಅತ್ತಿತ್ತ ಸಂಚರಿಸಿದೆವು. ಎಲ್ಲೆಲ್ಲಿಯೂ ಶಾಂತಿ ಸಮಾಧಾನವಿದೆ” ಎಂದವು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”


ರಾತ್ರಿವೇಳೆಯಲ್ಲಿ ಒಬ್ಬ ಮನುಷ್ಯನು ಕೆಂಪು ಬಣ್ಣದ ಕುದುರೆಯ ಮೇಲೆ ಸವಾರಿ ಮಾಡುವದನ್ನು ಕಂಡೆನು. ಅವನು ಕಣಿವೆಯ ಸುಗಂಧ ಮರಗಳ ಬಳಿ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಮತ್ತು ಬಿಳಿ ಕುದುರೆಗಳು ನಿಂತಿದ್ದವು.


ಯೆಹೋವನು ಸೈತಾನನಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಿದ್ದೆ” ಎಂದು ಉತ್ತರಕೊಟ್ಟನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಸೀಸದಿಂದ ಮಾಡಲ್ಪಟ್ಟ ಒಂದು ಮುಚ್ಚಳವನ್ನು ಆ ಬುಟ್ಟಿಯಿಂದ ತೆಗೆಯಲಾಯಿತು. ಆಗ ಅದರೊಳಗೆ ಒಬ್ಬ ಹೆಂಗಸು ಇರುವುದನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು