Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:19 - ಪರಿಶುದ್ದ ಬೈಬಲ್‌

19 “ಈ ಕೊಂಬುಗಳೇನು?” ಎಂದು ನಾನು ದೇವದೂತನೊಂದಿಗೆ ವಿಚಾರಿಸಿದೆನು. ಅದಕ್ಕವನು, “ಇವು ಬಲಿಷ್ಠವಾದ ಕೊಂಬುಗಳು (ಬಲಿಷ್ಠವಾದ ಜನಾಂಗಗಳು); ಇಸ್ರೇಲ್, ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಪರದೇಶಗಳಿಗೆ ಚದರಿಹೋಗುವಂತೆ ಮಾಡಿವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಈ ಕೊಂಬುಗಳು ಏನನ್ನು ಸೂಚಿಸುತ್ತವೆ?” ಎಂದು ನಾನು ಕೇಳಿದಾಗ ಸೂತ್ರಧಾರಿಯಾದ ದೂತನು: ‘ಇವು ಜೂದ, ಇಸ್ರಯೇಲ್, ಮತ್ತು ಜೆರುಸಲೇಮಿನ ಪ್ರಜೆಗಳನ್ನು ಚದರಿಸಿಬಿಟ್ಟ ಕೊಂಬುಗಳು,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ವಿವರಿಸುವ ದೂತನನ್ನು ಕುರಿತು ಇವು ಏನು ಎಂದು ನಾನು ಕೇಳಿದ್ದಕ್ಕೆ ಅವನು - ಇವು ಯೆಹೂದ ಇಸ್ರಾಯೇಲು ಯೆರೂಸಲೇಮುಗಳನ್ನು ಚದರಿಸಿರುವ ಕೊಂಬುಗಳು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ನನ್ನ ಸಂಗಡ ಮಾತನಾಡಿದ ದೂತನಿಗೆ ನಾನು, “ಇದೇನು?” ಎಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನೂ ಚದರಿಸಿದ ಕೊಂಬುಗಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:19
20 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿಮ್ಮ ಪೂರ್ವಿಕರು ನನ್ನನ್ನು ಕೋಪಗೊಳಿಸಿದರು. ಆದ್ದರಿಂದ ಅವರನ್ನು ನಾಶಮಾಡಲು ನಾನು ತೀರ್ಮಾನಿಸಿದೆನು. ಮತ್ತು ಈ ತೀರ್ಮಾನವನ್ನು ಬದಲಾಯಿಸುವದೇ ಇಲ್ಲವೆಂದು ನಿರ್ಧರಿಸಿದೆನು.


“ನೀನು ಎಲ್ಲಿಗೆ ಹೋಗುತ್ತೀ?” ಎಂದು ನಾನು ಅವನನ್ನು ವಿಚಾರಿಸಿದೆನು. “ನಾನು ಜೆರುಸಲೇಮ್ ಎಷ್ಟು ಉದ್ದಗಲವಿದೆಯೆಂದು ಅಳತೆ ಮಾಡಲು ಹೋಗುತ್ತಿದ್ದೇನೆ” ಎಂದನು.


“ಯಾವ ಕೆಲಸಕ್ಕಾಗಿ ಈ ಕೆಲಸಗಾರರು ಬರುತ್ತಿದ್ದಾರೆ?” ಎಂದು ನಾನು ವಿಚಾರಿಸಿದೆನು. ಅದಕ್ಕಾತನು, “ಯೆಹೂದದ ಜನರನ್ನು ವಿದೇಶಗಳಲ್ಲಿ ಚದರಿ ಹೋಗುವಂತೆ ಮಾಡಿದ ಜನಾಂಗಗಳನ್ನು ಈ ಕೊಂಬುಗಳು ಸೂಚಿಸುತ್ತವೆ. ಈ ಕೊಂಬುಗಳು ಯೆಹೂದದ ಜನರನ್ನು ಎತ್ತಿ ಪರದೇಶಗಳಿಗೆ ಬಿಸಾಡಿದವು. ಈ ಕೊಂಬುಗಳು ಯಾರಿಗೂ ದಯೆ ತೋರಿಸಲಿಲ್ಲ. ಆದರೆ ಈ ನಾಲ್ಕು ಮಂದಿ ಕೆಲಸಗಾರರು ಆ ಕೊಂಬುಗಳಿಗೆ ಭಯಪಡಿಸಿ ಅವುಗಳನ್ನು ಎತ್ತಿ ಬಿಸಾಡಲು ಬಂದಿದ್ದಾರೆ” ಎಂದು ಹೇಳಿದನು.


ಆಗ ನಾನು, “ಸ್ವಾಮೀ, ಈ ಕುದುರೆಗಳು ಯಾಕೆ?” ಎಂದು ವಿಚಾರಿಸಿದೆನು. ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನು ಉತ್ತರಿಸುತ್ತಾ, “ಈ ಕುದುರೆಗಳು ಯಾತಕ್ಕಾಗಿ ಎಂದು ನಾನು ನಿನಗೆ ತೋರಿಸುತ್ತೇನೆ” ಅಂದನು.


ಇದನ್ನು ಕೇಳಿ ಅವರಿಗೆ ಸಿಟ್ಟುಬಂತು. ಮತ್ತು ಯೆಹೂದ್ಯರಿಗೆ ಉಪದ್ರವ ಕೊಡಲು ಪ್ರಾರಂಭಿಸಿದರು. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸಲೂ ಕಟ್ಟುವವರನ್ನು ನಿರಾಶೆಪಡಿಸಲೂ ಪ್ರಯತ್ನಿಸಿದರು.


ಆ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಬೇರೆ ಜನರು ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರಿಗೆ ವಿರುದ್ಧವಾಗಿದ್ದರು. ಸೆರೆಯಿಂದ ಬಂದ ಜನರು ಇಸ್ರೇಲರ ದೇವರಾದ ಯೆಹೋವನ ದೇವಾಲಯವನ್ನು ಕಟ್ಟುತ್ತಿದ್ದಾರೆಂಬ ವರ್ತಮಾನವನ್ನು ವೈರಿಗಳು ಕೇಳಿ ಜೆರುಬ್ಬಾಬೆಲನ ಬಳಿಗೂ ಮತ್ತು ಕುಲಪ್ರಧಾನರ ಬಳಿಗೂ ಬಂದು, “ಕಟ್ಟುವ ಕಾರ್ಯದಲ್ಲಿ ನಿಮಗೆ ಸಹಾಯ ಮಾಡಲು ಬಂದಿದ್ದೇವೆ. ನಾವು ಸಹ ನಿಮ್ಮಂತೆಯೇ ದೇವರನ್ನು ಪ್ರಾರ್ಥಿಸುತ್ತೇವೆ. ಅಶ್ಶೂರದ ರಾಜನಾದ ಏಸರ್ಹದ್ದೋನನು ನಮ್ಮನ್ನು ಇಲ್ಲಿಗೆ ತಂದು ಬಿಟ್ಟಂದಿನಿಂದ ನಾವು ನಿಮ್ಮ ದೇವರನ್ನೇ ಆರಾಧಿಸುತ್ತೇವೆ” ಅಂದರು.


ಅರ್ತಷಸ್ತನು ಪರ್ಶಿಯಾದ ರಾಜನಾದಾಗ ಬಿಷ್ಲಾಮ್, ಮಿತ್ರದಾತ್ ಮತ್ತು ಟಾಬೆಯೇಲ್ ಈ ಮೊದಲಾದವರು ಯೆಹೂದ್ಯರ ವಿರುದ್ಧವಾಗಿ ರಾಜನಿಗೆ ಆಪಾದನಾ ಪತ್ರವನ್ನು ಅರಮೇಯಿಕ್ ಭಾಷೆಯಲ್ಲಿಯೂ ಅದರ ಲಿಪಿಯಲ್ಲಿಯೂ ಬರೆದರು.


ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಆ ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನೂ ಸುಲಭವಾಗಿ ಗೆಲ್ಲುವೆವೆಂದು ಅವರು ನೆನೆಸಿದ್ದರು.


ಲೊ ಡೆಬಾರಿನಲ್ಲಿ ನೀವು ಸಂತೋಷವಾಗಿದ್ದೀರಿ. “ಕರ್ನಯಿಮನ್ನು ನಾವು ನಮ್ಮ ಬಲದಿಂದಲೇ ಗೆದ್ದಿದ್ದೇವೆ” ಎಂದು ನೀವು ಹೇಳುತ್ತೀರಿ.


ನಾರುಮಡಿಯನ್ನು ಧರಿಸಿ ನೀರಿನ ಮೇಲೆ ನಿಂತುಕೊಂಡಿದ್ದ ಮನುಷ್ಯನು ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿದನು. ಅವನು ಶಾಶ್ವತವಾದ ದೇವರ ಮೇಲೆ ಆಣೆಮಾಡಿ, “ಮೂರುವರೆ ವರ್ಷ ಕಳೆಯಬೇಕು. ದೇವರ ಭಕ್ತರ ಬಲವು ಸಂಪೂರ್ಣವಾಗಿ ಮುರಿದುಹೋಗುವದು. ಆಮೇಲೆ ಎಲ್ಲಾ ಸಂಗತಿಗಳು ಜರುಗುವವು” ಎಂದು ಹೇಳಿದನು.


ಆ ಸಮಯದಲ್ಲಿ ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾಗಿದ್ದ ತತ್ತೆನೈ ಮತ್ತು ಶೆತರ್ಬೋಜೆನೈ ಮತ್ತು ಅವರ ಸಂಗಡಿಗರು ಜೆರುಬ್ಬಾಬೆಲ್, ಯೇಷೂವ ಮತ್ತು ಅವರ ಜೊತೆಗಾರರ ಬಳಿ ಬಂದು, “ನಿಮಗೆ ದೇವಾಲಯವನ್ನು ಮತ್ತೆ ಕಟ್ಟಲೂ ಅದನ್ನು ಹೊಸದಾಗಿ ಮಾಡಲೂ ಅಪ್ಪಣೆ ಕೊಟ್ಟವರು ಯಾರು?


ಪ್ರವಾದಿಗಳಲ್ಲಿ ಚಿದ್ಕೀಯ ಎಂಬ ಹೆಸರಿನವನೊಬ್ಬನಿದ್ದನು. ಅವನು ಕೆನಾನನ ಮಗ. ಚಿದ್ಕೀಯನು ಕೆಲವು ಕಬ್ಬಿಣದ ಕೊಂಬುಗಳನ್ನು ಮಾಡಿಸಿದ್ದನು. ಆಗ ಅವನು ಅಹಾಬನಿಗೆ, “ಯೆಹೋವನು ಹೀಗೆನ್ನುವನು: ‘ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲು ನೀನು ಈ ಕೊಂಬುಗಳನ್ನು ಬಳಸುವೆ. ನೀನು ಅವರನ್ನು ಸೋಲಿಸುವೆ ಮತ್ತು ನಾಶಗೊಳಿಸುವೆ’” ಎಂದು ಹೇಳಿದನು.


“ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ! ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’” ಎಂದು ಹೇಳುವೆನು.


ಮೋವಾಬಿನ ಬಲವನ್ನು ಕತ್ತರಿಸಲಾಗಿದೆ. ಅದರ ತೋಳನ್ನು ಮುರಿಯಲಾಗಿದೆ” ಇದು ಯೆಹೋವನ ನುಡಿ.


ನಾನು ಅಲ್ಲಿ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋದೆ. ಇದೆಲ್ಲದರ ಅರ್ಥವೇನೆಂದು ಅವನನ್ನು ಕೇಳಿದೆ. ಅವನು ಇವುಗಳ ಅರ್ಥವನ್ನು ವಿವರಿಸಿದನು.


ಆಗ ನಾನು ಮೇಲೆ ನೋಡಿದಾಗ ನಾಲ್ಕು ಕೊಂಬುಗಳನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು