ಜೆಕರ್ಯ 1:3 - ಪರಿಶುದ್ದ ಬೈಬಲ್3 ಆದ್ದರಿಂದ ನಿನ್ನ ಜನರಿಗೆ ನೀನು ಈ ವಿಷಯಗಳನ್ನು ತಿಳಿಸಬೇಕು. ಯೆಹೋವನು ಹೇಳುವುದೇನೆಂದರೆ, “ನನ್ನ ಬಳಿಗೆ ಹಿಂದಿರುಗಿರಿ. ಆಗ ನಾನು ನಿಮ್ಮ ಬಳಿಗೆ ಹಿಂದಿರುಗುವೆನು” ಇದು ಸರ್ವಶಕ್ತನಾದ ಯೆಹೋವನ ಮಾತುಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎಂದೇ ನೀನು ನನ್ನ ಜನರಿಗೆ ಹೀಗೆಂದು ಹೇಳು: “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮರಳಿ ನನಗೆ ಅಭಿಮುಖರಾಗಿರಿ. ಆಗ ನಾನು ನಿಮಗೆ ಮರಳಿ ಅಭಿಮುಖನಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಕಡೆಗೆ ಪುನಃ ತಿರುಗಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ; ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ನೀನು ಅವರಿಗೆ ಹೇಳತಕ್ಕದ್ದೇನೆಂದರೆ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ಬಳಿಗೆ ತಿರುಗಿಕೊಳ್ಳಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆಗ, ‘ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.