ಜೆಕರ್ಯ 1:4 - ಪರಿಶುದ್ದ ಬೈಬಲ್4 ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿಮ್ಮ ಪಿತೃಗಳಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುರ್ಮಾರ್ಗ ದುಷ್ಕೃತ್ಯಗಳಿಂದ ಹಿಂದಿರುಗಿರಿ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.
ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”