Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:8 - ಪರಿಶುದ್ದ ಬೈಬಲ್‌

8 ರಾತ್ರಿವೇಳೆಯಲ್ಲಿ ಒಬ್ಬ ಮನುಷ್ಯನು ಕೆಂಪು ಬಣ್ಣದ ಕುದುರೆಯ ಮೇಲೆ ಸವಾರಿ ಮಾಡುವದನ್ನು ಕಂಡೆನು. ಅವನು ಕಣಿವೆಯ ಸುಗಂಧ ಮರಗಳ ಬಳಿ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಮತ್ತು ಬಿಳಿ ಕುದುರೆಗಳು ನಿಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ರಾತ್ರಿಯಲ್ಲಿ ನನಗೆ ಈ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನೇರಿದ್ದ ಒಬ್ಬ ವ್ಯಕ್ತಿ ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದಾನೆ. ಅವನ ಹಿಂದೆ ಕೆಂಪು, ನಸುಗೆಂಪು ಮತ್ತು ಬಿಳಿಯ ಕುದುರೆಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಾತ್ರಿಯಲ್ಲಿ ನನಗೆ ದರ್ಶನವಾಯಿತು - ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳಿ ಕುದುರೆಗಳನ್ನು ಹತ್ತಿದವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬನು, ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಬಣ್ಣದ ಹಾಗು ಬಿಳಿಯ ಕುದುರೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:8
26 ತಿಳಿವುಗಳ ಹೋಲಿಕೆ  

ಆಗ ಮತ್ತೊಂದು ಕುದುರೆಯು ಹೊರಗೆ ಬಂದಿತು. ಇದು ಕೆಂಪು ಕುದುರೆಯಾಗಿತ್ತು. ಈ ಕುದುರೆಯ ಮೇಲೆ ಕುಳಿತಿದ್ದ ಸವಾರನಿಗೆ ಲೋಕದಲ್ಲಿದ್ದ ಶಾಂತಿಯನ್ನು ತೆಗೆದುಹಾಕಲೂ ಜನರು ಒಬ್ಬರನ್ನೊಬ್ಬರು ಕೊಲ್ಲುವಂತೆ ಮಾಡಲೂ ಅವನಿಗೆ ಅಧಿಕಾರವನ್ನು ನೀಡಲಾಗಿತ್ತು. ಈ ಸವಾರನಿಗೆ ಒಂದು ಮಹಾಖಡ್ಗವನ್ನೂ ಕೊಡಲಾಗಿತ್ತು.


“ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”


ಮರುಭೂಮಿಯ ಮೇಲೆ ಮರಗಳು ಬೆಳೆಯುವವು. ಅಲ್ಲಿ ದೇವದಾರು, ಆಲೀವ್, ಕಸ್ತೂರಿಜಾಲಿ, ತುರಾಯಿ, ತಪಸಿ ಮತ್ತು ತಿಲಕ ವೃಕ್ಷಗಳು ಇರುವವು.


“ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಆ ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಆ ಮಹಾವೃದ್ಧನ ಸನ್ನಿಧಿಗೆ ತರಲಾಯಿತು.


ದಾನಿಯೇಲನು ಹೀಗೆಂದನು: “ನನಗಾದ ರಾತ್ರಿಯ ದರ್ಶನದಲ್ಲಿ, ನಾಲ್ಕು ದಿಕ್ಕಿನಿಂದ ಗಾಳಿಯು ಬೀಸುತ್ತಿತ್ತು. ಆ ಬಿರುಗಾಳಿಯು ಸಮುದ್ರವನ್ನು ಕೆರಳಿಸಿತು.


ಅಂದು ರಾತ್ರಿ ದಾನಿಯೇಲನಿಗೆ ದೇವದರ್ಶನವಾಯಿತು. ಆಗ ದಾನಿಯೇಲನು ಪರಲೋಕದ ದೇವರನ್ನು ಹೀಗೆ ಸ್ತುತಿಸಿದನು:


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ ರಾತ್ರಿಯ ಕನಸುಗಳಿಂದ ಯೋಚನೆಯಲ್ಲಿರುವಾಗ


ಸೊಲೊಮೋನನು ಗಿಬ್ಯೋನಿನಲ್ಲಿದ್ದಾಗ, ಯೆಹೋವನು ರಾತ್ರಿ ಕನಸಿನಲ್ಲಿ ಅವನಿಗೆ ದರ್ಶನವನ್ನು ನೀಡಿ, “ನೀನು ಏನುಬೇಕಾದರೂ ಕೇಳು. ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು.


ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.


ನನ್ನ ಪ್ರಿಯನು ತನ್ನ ತೋಟದಲ್ಲಿರುವ ಸುಗಂಧಸಸ್ಯಗಳ ದಿಬ್ಬಗಳಿಗೆ ಹೋಗಿದ್ದಾನೆ; ತೋಟಗಳಲ್ಲಿ ಮಂದೆಯನ್ನು ಮೇಯಿಸುವುದಕ್ಕೂ ನೆಲದಾವರೆಗಳನ್ನು ಕೊಯ್ಯುವುದಕ್ಕೂ ಹೋಗಿದ್ದಾನೆ.


ನನ್ನ ಪ್ರಿಯನು ನನ್ನವನೇ! ನಾನು ಅವನವಳೇ! ಹಗಲು ತನ್ನ ಕೊನೆ ಉಸಿರೆಳೆಯುವತನಕ, ನೆರಳು ಓಡಿಹೋಗುವ ತನಕ


ನಾನು ನೋಡಿದಾಗ ನನ್ನ ಮುಂದೆ ಒಂದು ಬಿಳಿ ಕುದುರೆಯಿರುವುದು ನನಗೆ ಕಾಣಿಸಿತು. ಕುದುರೆಯ ಮೇಲಿದ್ದ ಸವಾರನ ಕೈಯಲ್ಲಿ ಒಂದು ಬಿಲ್ಲು ಇತ್ತು. ಆ ಸವಾರನಿಗೆ ಒಂದು ಕಿರೀಟವನ್ನು ಕೊಡಲಾಯಿತು. ಅವನು ಶತ್ರುವನ್ನು ಸೋಲಿಸುತ್ತಾ ಜಯಗಳಿಸುವುದಕ್ಕಾಗಿ ಹೊರಟನು.


ಪರ್ಶಿಯದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೇ ತಿಂಗಳಿನ (ಶೆಬಾಟ್) ಇಪ್ಪತ್ತನಾಲ್ಕನೆಯ ದಿವಸ ಜೆಕರ್ಯನು ಯೆಹೋವನಿಂದ ಇನ್ನೊಂದು ಸಂದೇಶವನ್ನು ಪಡೆದನು. ಈತನು ಪ್ರವಾದಿಯಾದ ಇದ್ದೋವಿನ ಮಗನಾದ ಬೆರೆಕ್ಯನ ಮಗನು. ಆ ಸಂದೇಶವು ಹೀಗಿತ್ತು.


ಆಗ ಸುಗಂಧ ಮರಗಳ ಬಳಿ ನಿಂತಿದ್ದ ಮನುಷ್ಯನು, “ಈ ಕುದುರೆಗಳು ಭೂಮಿಯ ಮೇಲೆ ಅತ್ತಿತ್ತ ತಿರುಗಾಡುವಂತೆ ಯೆಹೋವನು ಕಳುಹಿಸಿದನು” ಎಂದನು.


ಆಗ ಯೆಹೋವನ ದೂತನೊಂದಿಗೆ ಆ ಕುದುರೆಗಳು ಮಾತನಾಡುತ್ತಾ, “ನಾವು ಭೂಮಿಯ ಮೇಲೆ ಅತ್ತಿತ್ತ ಸಂಚರಿಸಿದೆವು. ಎಲ್ಲೆಲ್ಲಿಯೂ ಶಾಂತಿ ಸಮಾಧಾನವಿದೆ” ಎಂದವು.


ಆ ರಾತ್ರಿ ದೇವರು ಕನಸಿನಲ್ಲಿ ಅವನೊಂದಿಗೆ ಮಾತನಾಡಿದನು. ದೇವರು ಅವನನ್ನು, “ಯಾಕೋಬನೇ, ಯಾಕೋಬನೇ” ಎಂದು ಕರೆದನು. ಅದಕ್ಕೆ ಇಸ್ರೇಲನು, “ಇಗೋ, ಇದ್ದೇನೆ” ಎಂದು ಉತ್ತರಕೊಟ್ಟನು.


ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು