Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:1 - ಪರಿಶುದ್ದ ಬೈಬಲ್‌

1 ವಸಂತ ಕಾಲದಲ್ಲಿ ಮಳೆಗಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಯೆಹೋವನು ಮಿಂಚನ್ನು ಕಳುಹಿಸುವನು; ಆಗ ಮಳೆ ಸುರಿಯುವುದು ಮತ್ತು ದೇವರು ಎಲ್ಲರ ಹೊಲಗಳಲ್ಲಿ ಸಸಿಗಳು ಬೆಳೆಯುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ವಿುಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಿಂದ ಹಿಂಗಾರು ಮಳೆಯ ಕಾಲದಲ್ಲಿ, ಮಳೆಯನ್ನು ಬೇಡಿಕೊಳ್ಳಿರಿ. ಹೀಗೆ ಯೆಹೋವ ದೇವರು ಮಿಂಚುವ ಮೋಡಗಳನ್ನು ಮಾಡಿ, ಅವರಿಗೆ ಸಮೃದ್ಧಿಯಾದ ಮಳೆಯನ್ನೂ, ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:1
31 ತಿಳಿವುಗಳ ಹೋಲಿಕೆ  

“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.


ಸಹೋದರ ಸಹೋದರಿಯರೇ, ತಾಳ್ಮೆಯಿಂದಿರಿ, ಪ್ರಭುವಾದ ಯೇಸು ಪ್ರತ್ಯಕ್ಷನಾಗುತ್ತಾನೆ. ಆದ್ದರಿಂದ ಅಲ್ಲಿಯವರೆಗೆ ತಾಳ್ಮೆಯಿಂದಿರಿ. ತನ್ನ ಅಮೂಲ್ಯ ಬೆಳೆಯು ಭೂಮಿಯಿಂದ ಬರುವ ತನಕ ರೈತನು ತಾಳ್ಮೆಯಿಂದ ಕಾಯುತ್ತಾನೆ. ಮೊದಲ ಹಾಗೂ ಕೊನೆಯ ಮಳೆಯು ತನ್ನ ಬೆಳೆಯ ಮೇಲೆ ಸುರಿಯುವ ತನಕ ರೈತನು ತಾಳ್ಮೆಯಿಂದ ಕಾದಿರುತ್ತಾನೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ಆ ಸಮಯದಲ್ಲಿ ಯೆಹೋವನು ನಿಮಗಾಗಿ ಮಳೆ ಸುರಿಸುವನು. ನೀವು ಭೂಮಿಯಲ್ಲಿ ಬೀಜಬಿತ್ತಿದ್ದಾಗ ಫಸಲನ್ನು ಹೊಂದುವಿರಿ. ನಿಮಗೆ ಬಹುದೊಡ್ಡ ಸುಗ್ಗಿ ಆಗುವದು. ಹೊಲದಲ್ಲಿ ನಿಮ್ಮ ಪಶುಗಳಿಗೆ ಬೇಕಾದಷ್ಟು ಹುಲ್ಲು ಇರುವದು. ಮೇಯಲು ನಿಮ್ಮ ಕುರಿಗಳಿಗೆ ಬೇಕಾದಷ್ಟು ಬಯಲಿವೆ.


ದೇವರೇ, ಭೂಪಾಲಕನು ನೀನೇ. ಭೂಮಿಗೆ ನೀರೆರೆದು ಹದಗೊಳಿಸುವಾತನು ನೀನೇ. ತೊರೆಗಳನ್ನು ತುಂಬಿಸಿ ಸುಗ್ಗಿಯನ್ನು ಬರಮಾಡುವಾತನು ನೀನೇ.


ಆಕಾಶವು ಮೋಡಗಳೇ ಇರದ ಕಾದ ಹಿತ್ತಾಳೆಯಂತಿರುವುದು. ಕಾಲಿನ ಅಡಿಯಲ್ಲಿರುವ ನೆಲವು ಕಬ್ಬಿಣದಂತೆ ಗಟ್ಟಿಯಾಗಿರುವುದು.


ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಕೇಳುವುದಿಲ್ಲ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ.


“ನಾನು ಮಳೆಯನ್ನು ನಿಲ್ಲಿಸಿದೆನು. ಸುಗ್ಗಿಗೆ ಮೂರು ತಿಂಗಳು ಇರುವಾಗಲೇ ಮಳೆಗರೆಯುವುದನ್ನು ನಿಲ್ಲಿಸಿದೆನು. ಆದ್ದರಿಂದ ಪೈರು ಬೆಳೆಯಲಿಲ್ಲ. ಆಮೇಲೆ ನಾನು ಒಂದು ಪಟ್ಟಣದ ಮೇಲೆ ಮಳೆ ಬೀಳುವಂತೆ ಮಾಡಿದೆನು. ಬೇರೆ ಪಟ್ಟಣಗಳ ಮೇಲೆ ಬೀಳದಂತೆ ಮಾಡಿದೆನು. ದೇಶದ ಒಂದು ಭಾಗದಲ್ಲಿ ಮಳೆ ಸುರಿಯಿತು. ಇನ್ನೊಂದು ಭಾಗವು ಒಣಗಿ ಬೆಂಗಾಡಾಗಿತ್ತು.


ನೀನು ಒಳ್ಳೆಯತನವನ್ನು ಬಿತ್ತಿದರೆ ಪ್ರೀತಿಯೆಂಬ ಬೆಳೆಯನ್ನು ಕೊಯ್ಯುವೆ. ನಿನ್ನ ನೆಲವನ್ನು ಉಳುಮೆ ಮಾಡು. ಆಗ ನೀನು ಯೆಹೋವನೊಂದಿಗೆ ಬೆಳೆಯನ್ನು ಕೊಯ್ಯುವೆ. ಆತನು ಬರುವನು. ಮತ್ತು ಆತನ ಒಳ್ಳೆಯತನವು ನಿನ್ನ ಮೇಲೆ ಮಳೆಯಂತೆ ಸುರಿಯುವದು.


ನಾನು ನನ್ನ ಕುರಿಗಳನ್ನೂ ನನ್ನ ಬೆಟ್ಟದ ಸುತ್ತಲೂ ಇರುವ ಸ್ಥಳಗಳನ್ನೂ ಆಶೀರ್ವದಿಸುವೆನು. ಸರಿಯಾದ ಸಮಯಕ್ಕೆ ಮಳೆ ಬೀಳುವಂತೆ ಮಾಡುವೆನು. ಮತ್ತು ಅದನ್ನು ಆಶೀರ್ವಾದದ ಸುರಿಮಳೆಯಂತೆ ಸುರಿಸುವೆನು.


ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.


ಯೆಹೋವನು ಗರ್ಜಿಸುವ ಗುಡುಗನ್ನು ಬರಮಾಡುತ್ತಾನೆ. ಆತನು ಆಕಾಶದಿಂದ ನೀರನ್ನು ಮಹಾಪ್ರವಾಹದಂತೆ ಸುರಿಸುತ್ತಾನೆ. ಆತನು ಭೂಮಿಯ ಎಲ್ಲೆಡೆಯಿಂದ ಮೇಘಗಳು ಆಕಾಶಕ್ಕೆ ಏರಿಹೋಗುವಂತೆ ಮಾಡುತ್ತಾನೆ. ಆತನು ಮಳೆಯೊಂದಿಗೆ ಸಿಡಿಲನ್ನು ಬೀಳಿಸುತ್ತಾನೆ. ತನ್ನ ಭಂಡಾರದಿಂದ ಹೊರಗೆ ಗಾಳಿ ಬೀಸುವಂತೆ ಮಾಡುತ್ತಾನೆ.


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ರಾಜನು ಸಂತೋಷದಿಂದಿರುವಾಗ ಎಲ್ಲರ ಜೀವನವು ಉತ್ತಮವಾಗಿರುವುದು. ರಾಜನು ನಿನ್ನನ್ನು ಮೆಚ್ಚಿಕೊಂಡರೆ, ಅದು ನಿನ್ನ ಪಾಲಿಗೆ ಮೋಡದಿಂದ ಸುರಿಯುವ ಮುಂಗಾರು ಮಳೆಯಂತಿರುವುದು.


ಆತನು ಬೆಟ್ಟಗಳ ಮೇಲೆ ಮಳೆಯನ್ನು ಸುರಿಸುವನು. ಆತನ ಸೃಷ್ಟಿಗಳು ಭೂಮಿಗೆ ಅಗತ್ಯವಾದ ಪ್ರತಿಯೊಂದನ್ನೂ ಒದಗಿಸುತ್ತವೆ.


ಆತನು ಗರ್ಜಿಸಿದಾಗ ಸಮುದ್ರದ ನೀರು ಭೋರ್ಗರೆಯುತ್ತದೆ. ಆತನು ಇಡೀ ಭೂಮಂಡಲದಿಂದ ಮೋಡಗಳು ಮೇಲೆ ಹೋಗುವಂತೆ ಮಾಡುತ್ತಾನೆ. ಆತನು ಮಳೆಯ ಜೊತೆ ಮಿಂಚನ್ನು ಕಳುಹಿಸುತ್ತಾನೆ. ತನ್ನ ಭಂಡಾರದಿಂದ ಗಾಳಿಯನ್ನು ಹೊರಗೆ ಬಿಡುತ್ತಾನೆ.


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ನಾನು ಬೀಜವನ್ನು ಬಿತ್ತಿದೆನು; ಅಪೊಲ್ಲೋಸನು ನೀರನ್ನು ಹಾಕಿದನು. ಆದರೆ ಬೀಜವನ್ನು ಬೆಳೆಯಿಸಿದವನು ದೇವರೇ.


ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”


ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು.


ಮಳೆಗಾಗಿಯೋ ಎಂಬಂತೆ ಅವರು ನನ್ನ ಮಾತುಗಳಿಗಾಗಿ ಎದುರುನೋಡುತ್ತಿದ್ದರು. ವಸಂತ ಕಾಲದಲ್ಲಿ ಬೀಳುವ ಮಳೆಯ ನೀರನ್ನೋ ಎಂಬಂತೆ ಅವರು ನನ್ನ ಮಾತುಗಳನ್ನು ಕುಡಿಯುತ್ತಿದ್ದರು.


ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು; ಮಿಂಚನ್ನೂ ಮಳೆಯನ್ನೂ ಬರಮಾಡುವನು; ಗಾಳಿಯನ್ನು ಬೀಸಮಾಡುವನು.


ಯೆಹೂದದ ಜನರು, ‘ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯಿಂದಿರಬೇಕು. ಆತನು ನಮಗೆ ಸರಿಸಮಯದಲ್ಲಿ ಮುಂಗಾರು ಮತ್ತು ಹಿಂಗಾರುಮಳೆ ಸುರಿಸುತ್ತಾನೆ. ಸರಿಸಮಯಕ್ಕೆ ಫಸಲನ್ನು ಬರಮಾಡುತ್ತಾನೆ’ ಎಂದು ತಮ್ಮ ಹೃದಯದಲ್ಲಿ ಅಂದುಕೊಳ್ಳುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು