ಜೆಕರ್ಯ 10:5 - ಪರಿಶುದ್ದ ಬೈಬಲ್5 ಇವರು ಶತ್ರುಗಳನ್ನು ಜಯಿಸುವರು. ಸೈನಿಕರು ರಸ್ತೆಯ ಧೂಳಿನ ಮೇಲೆ ಮುನ್ನಡೆದು ಯೆಹೋವನು ಅವರೊಂದಿಗಿರುವದರಿಂದ ಅವರು ಅಶ್ವಾರೂಢನಾಗಿರುವ ಶತ್ರುಸೈನ್ಯವನ್ನು ಸದೆಬಡಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇವರು ವೀರರಾಗಿ ರಣದೊಳಗೆ [ಶತ್ರುಗಳನ್ನು] ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ತಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು. ಅಧ್ಯಾಯವನ್ನು ನೋಡಿ |
ಆ ಭಯಂಕರವಾದ ವ್ಯಾಧಿಯು ಶತ್ರುಗಳ ಶಿಬಿರದಲ್ಲಿರುವದು. ಅವರ ಬಳಿಯಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ ಮತ್ತು ಕತ್ತೆಗಳೆಲ್ಲಾ ಈ ವ್ಯಾಧಿಯಿಂದ ಸಂಕಟಪಡುವವು. ಆ ಸಮಯದಲ್ಲಿ ಆ ಜನರು ನಿಜವಾಗಿಯೂ ಯೆಹೋವನಿಗೆ ಭಯಪಡುವರು. ಪ್ರತಿಯೊಬ್ಬನೂ ತನ್ನ ನೆರೆಯವನ ಕೈಗಳನ್ನು ಹಿಡಿದುಕೊಳ್ಳುವನು ಮತ್ತು ಆ ನೆರೆಯವರು ಪರಸ್ಪರ ಹೊಡೆದಾಡಿಕೊಳ್ಳುವರು. ಯೆಹೂದವೂ ಜೆರುಸಲೇಮಿನೊಂದಿಗೆ ಕಾದಾಡುವದು. ಎಲ್ಲಾ ಜನಾಂಗಗಳ ಐಶ್ವರ್ಯವನ್ನು ಪಟ್ಟಣದ ಸುತ್ತಲೂ ಶೇಖರಿಸಿಟ್ಟಿರುವಾಗಲೂ ಇದು ಸಂಭವಿಸುವುದು. ಆಗ ಅಲ್ಲಿ ಬಹು ಸಂಖ್ಯೆಯಲ್ಲಿ ಬೆಳ್ಳಿಬಂಗಾರ ಮತ್ತು ಬಟ್ಟೆಗಳ ರಾಶಿ ಇರುವದು.
ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.