Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:8 - ಪರಿಶುದ್ದ ಬೈಬಲ್‌

8 “ನಾನು ಸಿಳ್ಳು ಹೊಡೆದು ಎಲ್ಲರನ್ನು ಒಟ್ಟುಗೂಡಿಸುವೆನು. ನಾನು ನಿಜವಾಗಿಯೂ ಅವರನ್ನು ರಕ್ಷಿಸುವೆನು. ಜನರು ಕಿಕ್ಕಿರಿದು ತುಂಬಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಸಭೆ ಸೇರಿಸುವೆನವರನು ನಿಸ್ಸಂದೇಹವಾಗಿ ವಿಮುಕ್ತಗೊಳಿಸುವೆನವರನು ಕರೆದು ಸನ್ನೆಮಾಡಿ ಹಿಂದಿನಂತೆ ಮುಂದೆಯೂ ಬೆಳೆವರವರು ಸಮೃದ್ಧಿಯಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು; ಅವರನ್ನು ವಿಮೋಚಿಸಿದ್ದೇನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅವರಿಗೆ ಸಿಳ್ಳುಹಾಕಿ, ಅವರನ್ನು ಕೂಡಿಸುವೆನು. ನಿಶ್ಚಯವಾಗಿ ಅವರನ್ನು ವಿಮೋಚಿಸಿದ್ದೇನೆ. ಅವರು ಹಿಂದಿನಂತೆ ಮುಂದೆಯೂ ಸಮೃದ್ಧಿಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:8
25 ತಿಳಿವುಗಳ ಹೋಲಿಕೆ  

ಎದ್ದು ನೋಡು! ದೂರದೇಶದ ಜನಾಂಗಗಳಿಗೆ ದೇವರು ಗುರುತನ್ನು ಕೊಡುತ್ತಿದ್ದಾನೆ. ಆತನು ಧ್ವಜವನ್ನೆತ್ತಿ ಆ ಜನರನ್ನು ಸಿಳ್ಳುಹಾಕಿ ಕರೆಯುತ್ತಿದ್ದಾನೆ. ಶತ್ರುಗಳು ದೂರದೇಶದಿಂದ ಬರುತ್ತಿದ್ದಾರೆ. ಅವರು ಬೇಗನೆ ನಿನ್ನ ದೇಶವನ್ನು ಪ್ರವೇಶಿಸುವರು. ಅವರು ಬಹುವೇಗವಾಗಿ ಬರುತ್ತಿದ್ದಾರೆ.


“ಆ ಸಮಯದಲ್ಲಿ ಯೆಹೋವನು ನೊಣಗಳನ್ನು ಕರೆಯುವನು. ಆ ನೊಣಗಳು ಈಗ ಈಜಿಪ್ಟಿನ ನದಿಗಳ ಸಮೀಪದಲ್ಲಿವೆ. ಯೆಹೋವನು ದುಂಬಿಗಳನ್ನು ಕರೆಯುವನು. ಆ ದುಂಬಿಗಳು ಈಗ ಅಶ್ಶೂರ್ ದೇಶದಲ್ಲಿವೆ. ಈ ವೈರಿಗಳು ನಿಮ್ಮ ದೇಶಕ್ಕೆ ಬಂದು


ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”


“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.


ಜೆರುಸಲೇಮೇ, ನಾವು ನಿನ್ನ ಒಡಂಬಡಿಕೆಗೆ ಮುದ್ರೆ ಹಾಕಲು ರಕ್ತವನ್ನು ಉಪಯೋಗಿಸಿದೆವು. ಆದ್ದರಿಂದ ನೆಲದ ಹೊಂಡದೊಳಗಿಂದ ಜನರನ್ನು ಬಿಡುಗಡೆ ಮಾಡಿದ್ದೇನೆ.


ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.


ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.”


ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.


ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು.


ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.


ಮರುಭೂಮಿಯ ಹಳ್ಳಗಳ ಸಮೀಪದಲ್ಲಿರುವ ಬಂಡೆಯ ಸಂದುಗೊಂದುಗಳಲ್ಲಿಯೂ ನೀರಿನ ಬಾವಿಗಳ ಬಳಿಯಲ್ಲಿರುವ ಮುಳ್ಳುಪೊದೆಗಳಲ್ಲಿಯೂ ಶಿಬಿರ ಹಾಕಿಕೊಳ್ಳುವರು.


ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ.


ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟಾಗಿ ಸೇರಿಸುತ್ತೇನೆ. ಇಸ್ರೇಲಿನಲ್ಲಿ ಉಳಿದವರನ್ನೆಲ್ಲಾ ಒಟ್ಟುಗೂಡಿಸುತ್ತೇನೆ. ಹಟ್ಟಿಯೊಳಗೆ ಕುರಿಗಳನ್ನು ಸೇರಿಸುವಂತೆ, ಹುಲ್ಲುಗಾವಲಿನಲ್ಲಿ ಕುರಿಮಂದೆ ಸೇರಿಸಲ್ಪಡುವಂತೆ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಆ ಸ್ಥಳವು ಜನಸಮೂಹದ ಗದ್ದಲದಿಂದ ತುಂಬಿಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು