ಜೆಕರ್ಯ 11:10 - ಪರಿಶುದ್ದ ಬೈಬಲ್10 ಆಗ ನಾನು ದಯೆ ಹೆಸರಿನ ಕೋಲನ್ನು ತೆಗೆದುಕೊಂಡು ತುಂಡುಮಾಡಿದೆನು. ಯೆಹೋವನು ಎಲ್ಲಾ ಜನರೊಂದಿಗೆ ಮಾಡಿದ ಒಡಂಬಡಿಕೆಯು ಮುರಿಯಿತು ಎಂಬುದಾಗಿ ಅವರಿಗೆ ತೋರಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು “ಕೃಪೆ” ಎಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು. ಆಗಲೇ ಮುರಿದುಹೋಯಿತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಳಿಕ ಎಲ್ಲ ರಾಷ್ಟ್ರಗಳೊಂದಿಗೆ ನಾನು ಮಾಡಿಕೊಂಡಿದ್ದ ಒಡಂಬಡಿಕೆಯನ್ನು ರದ್ದುಗೊಳಿಸಬೇಕೆಂದು ‘ಕೃಪೆ’ ಎಂಬ ಕೋಲನ್ನು ಮುರಿದುಬಿಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು ಕನಿಕರವೆಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ “ಕೃಪೆ” ಎಂಬ ನನ್ನ ಕೋಲನ್ನು ತೆಗೆದುಕೊಂಡು ಅದನ್ನು ಮುರಿದುಬಿಟ್ಟೆನು. ಹೀಗೆ ಎಲ್ಲಾ ಜನಾಂಗಗಳ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ರದ್ದುಗೊಳಿಸಿದೆನು. ಅಧ್ಯಾಯವನ್ನು ನೋಡಿ |
ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.