ಜೆಕರ್ಯ 11:12 - ಪರಿಶುದ್ದ ಬೈಬಲ್12 ಆಗ ನಾನು ಹೀಗೆಂದೆನು, “ನನಗೆ ಸಂಬಳ ಕೊಡಲು ನಿಮಗೆ ಇಷ್ಟವಿದ್ದರೆ ಕೊಡಿರಿ, ಇಷ್ಟವಿಲ್ಲದಿದ್ದರೆ ಬೇಡ.” ಆಗ ಅವರು ನನಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅನಂತರ ನಾನು ನಿಮಗೆ, “ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ ಇಲ್ಲವಾದರೆ ಬಿಡಿರಿ” ಅನ್ನಲು ಅವರು ಮೂವತ್ತು ತೊಲೆ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅನಂತರ ನಾನು ಅವರಿಗೆ, “ನಿಮಗೆ ಸರಿದೋರಿದರೆ ನನಗೆ ಸಂಬಳವನ್ನು ಕೊಡಿ; ಇಲ್ಲವಾದರೆ ಬಿಡಿ,” ಎಂದೆ. ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ಮೂವತ್ತು ಬೆಳ್ಳಿನಾಣ್ಯವನ್ನು ನನಗೆ ಸಂಬಳಕ್ಕಾಗಿ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅನಂತರ ನಾನು - ನಿಮಗೆ ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ, ಇಲ್ಲವಾದರೆ ಬಿಡಿರಿ ಅನ್ನಲು ಅವರು ಮೂವತ್ತು ತೊಲ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾನು ಅವರಿಗೆ, “ಇದು ನಿಮ್ಮ ಕಣ್ಣುಗಳಲ್ಲಿ ಒಳ್ಳೆಯದಾಗಿ ತೋರಿದರೆ, ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ,” ಎಂದೆನು. ಆಗ ಅವರು ನನಗೆ ಸಂಬಳವಾಗಿ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |
ಆದ್ದರಿಂದ ನಿನ್ನ ಸಹಾಯವು ನನಗೆ ಬೇಕಾಗಿದೆ. ನಿನ್ನ ಜನರನ್ನು ಲೆಬನೋನಿಗೆ ಕಳುಹಿಸು. ಅಲ್ಲಿ ಅವರು ನನಗಾಗಿ ದೇವದಾರುಮರಗಳನ್ನು ಕಡಿದು ಬೀಳಿಸಲಿ. ನನ್ನ ಸೇವಕರೂ ನಿನ್ನವರೊಂದಿಗೆ ಕೆಲಸಮಾಡುತ್ತಾರೆ. ನಿನ್ನ ಸೇವಕರಿಗೆ ಗೊತ್ತುಪಡಿಸಿದ ವೇತನವನ್ನು ನಾನು ಕೊಡುತ್ತೇನೆ. ಆದರೆ ನಿನ್ನ ಸಹಾಯ ನನಗೆ ಬೇಕು. ನಮ್ಮ ಬಡಗಿಗಳು ಚೀದೋನ್ಯರ ಬಡಗಿಗಳಂತೆ ಕುಶಲಕರ್ಮಿಗಳಲ್ಲ” ಎಂದು ಹೇಳಿ ಕಳುಹಿಸಿದನು.
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.