ಜೆಕರ್ಯ 11:5 - ಪರಿಶುದ್ದ ಬೈಬಲ್5 ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವುದಿಲ್ಲ. ವರ್ತಕರು ಕುರಿಗಳನ್ನು ಮಾರಿ, ‘ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ದೋಷಿಗಳೆಂದು ಎಣಿಸುವುದಿಲ್ಲ; ಮಾರುವವರು ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು. ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕೊಂಡುಕೊಳ್ಳುವವರು, ಅವುಗಳನ್ನು ಕೊಯ್ದರೂ ನಿರಪರಾಧಿಗಳೆನಿಸಿಕೊಳ್ಳುವರು. ಅವುಗಳನ್ನು ಮಾರುವವರು ‘ಸರ್ವೇಶ್ವರಸ್ವಾಮಿಗೆ ಸ್ತೋತ್ರ, ನಾವು ಧನವಂತರಾದೆವು’ ಎಂದುಕೊಳ್ಳುವರು. ಆ ಮಂದೆಯ ಕುರುಬರು ಸಹ ಅವುಗಳಿಗೆ ಕರುಣೆತೋರಿಸರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ನಿರ್ದೋಷಿಗಳೆನಿಸಿಕೊಳ್ಳುವರು; ಮಾರುವವರು - ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು; ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವುಗಳನ್ನು ಕೊಂಡುಕೊಳ್ಳುವವರು, ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ. ಅವುಗಳನ್ನು ಮಾರುವವರು, ‘ನಾನು ಐಶ್ವರ್ಯವಂತನಾದೆನು, ಯೆಹೋವ ದೇವರಿಗೆ ಸ್ತೋತ್ರ,’ ಎಂದೆನ್ನುತ್ತಾರೆ. ಅವರ ಸ್ವಂತ ಕುರುಬರೂ ಅವುಗಳನ್ನು ಕನಿಕರಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಇನ್ನು ಮುಂದೆ ಅವರು ನನ್ನ ಕುರುಬರಾಗಿರುವುದಿಲ್ಲ. ಇನ್ನು ಅವರಿಗೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.”
ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.