ಜೆಕರ್ಯ 11:7 - ಪರಿಶುದ್ದ ಬೈಬಲ್7 ಕೊಲ್ಲುವದಕ್ಕಾಗಿ ಬೆಳೆಸುವ ಕುರಿಗಳನ್ನು ನಾನು ಪರಾಮರಿಸಿದೆನು. ನನಗೆ ಎರಡು ಕೋಲುಗಳು ದೊರೆತವು. ಒಂದು ಕೋಲನ್ನು ದಯೆ ಎಂದೂ ಇನ್ನೊಂದನ್ನು ಒಗ್ಗಟ್ಟು ಎಂಬ ಹೆಸರಿನಿಂದಲೂ ಕರೆದೆನು. ಆ ಬಳಿಕ ಕುರಿಗಳನ್ನು ಪರಾಮರಿಸ ತೊಡಗಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ “ಕೃಪೆ” ಎಂತಲೂ ಇನ್ನೊಂದಕ್ಕೆ, “ಒಗ್ಗಟ್ಟು” ಎಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ನಾನು ಕೊಯ್ಗುರಿಗಳನ್ನು ವ್ಯಾಪಾರ ಮಾಡುವವರಿಗೋಸ್ಕರ ಆ ಮಂದೆಗೆ ಕುರಿಗಾಹಿ ಆದೆ. ಎರಡು ಕುರಿಗೋಲುಗಳನ್ನು ಕೈಗೆ ತೆಗೆದುಕೊಂಡು ಒಂದಕ್ಕೆ ‘ಕೃಪೆ’ ಎಂದೂ ಮತ್ತೊಂದಕ್ಕೆ ‘ಐಕ್ಯ’ ಎಂದೂ ಹೆಸರಿಟ್ಟು ಆ ಮಂದೆಯನ್ನು ಮೇಯಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ ಕನಿಕರವೆಂತಲೂ ಇನ್ನೊಂದಕ್ಕೆ ಒಗ್ಗಟ್ಟೆಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು, ವಿಶೇಷವಾಗಿ ಬಡವಾದ ಮಂದೆಯನ್ನು ಮೇಯಿಸಿದೆನು. ನಾನು ಎರಡು ಕೋಲುಗಳನ್ನು ತೆಗೆದುಕೊಂಡೆನು. ಒಂದಕ್ಕೆ “ಕೃಪೆ” ಎಂದೂ ಮತ್ತೊಂದಕ್ಕೆ “ಐಕ್ಯ” ಎಂದು ಹೆಸರಿಟ್ಟೆನು. ಹೀಗೆ ಮಂದೆಯನ್ನು ಮೇಯಿಸಿದೆನು. ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.