Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:8 - ಪರಿಶುದ್ದ ಬೈಬಲ್‌

8 ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆತಪ್ಪಿತು; ಅವೂ ನನಗೆ ಬೇಸರಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ, ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು. ಮಂದೆಯು ನನ್ನನ್ನು ಅಸಹ್ಯಪಡಿಸಿತು, ಮತ್ತು ಅವುಗಳಿಂದ ನನಗೆ ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:8
25 ತಿಳಿವುಗಳ ಹೋಲಿಕೆ  

“ಈ ಲೋಕವು ನಿಮ್ಮನ್ನು ದ್ವೇಷ ಮಾಡಿದರೆ, ಅದು ಮೊದಲು ನನ್ನನ್ನೇ ದ್ವೇಷ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.


ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.


ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.


ಅವರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರ ಮಕ್ಕಳು ಅನ್ಯರಿಗೆ ಹುಟ್ಟಿದ್ದಾರೆ. ಆದ್ದರಿಂದ ಈಗ ಆತನು ಅವರನ್ನೂ ಅವರ ದೇಶವನ್ನೂ ತಿರುಗಿ ನಾಶಮಾಡುವನು.”


ನೀತಿವಂತನು ನಂಬಿಕೆಯಿಂದಲೇ ಜೀವವನ್ನು ಹೊಂದಿಕೊಳ್ಳುವನು. ಆದರೆ ಅವನು ಭಯದಿಂದ ಹಿಂಜರಿದರೆ ನಾನು ಅವನಲ್ಲಿ ಸಂತೋಷಪಡುವುದಿಲ್ಲ.”


ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿಯೇ ನಾನು ಅವರನ್ನು ದ್ವೇಷಿಸಲು ಪ್ರಾರಂಭಿಸಿದೆನು. ಅವರು ಮಾಡುವ ದುಷ್ಕೃತ್ಯಗಳ ದೆಸೆಯಿಂದ ನಾನು ಅವರನ್ನು ನನ್ನ ಮನೆಯಿಂದ ಹೊರಡಿಸುವೆನು. ಇನ್ನು ಮುಂದೆ ಅವರನ್ನು ನಾನು ಪ್ರೀತಿಸುವುದಿಲ್ಲ. ಅವರ ನಾಯಕರು ನನಗೆ ವಿರುದ್ಧವಾಗಿ ದಂಗೆ ಎದ್ದವರು; ನನ್ನ ವಿರುದ್ಧವಾಗಿ ತಿರುಗಿಬಿದ್ದರು.


ಯೆಹೋವನೇ, ನಿನ್ನ ಹೆಸರಿನ ಒಳ್ಳೆಯತನ ಉಳಿಸಿಕೊಳ್ಳುವದಕ್ಕಾದರೂ ನಮ್ಮನ್ನು ದೂರ ತಳ್ಳಬೇಡ. ನಿನ್ನ ಮಹಿಮೆಯ ಸಿಂಹಾಸನದ ಗೌರವವನ್ನು ಕುಂದಿಸಬೇಡ. ನೀನು ನಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿಕೊ. ಆ ಒಡಂಬಡಿಕೆಯನ್ನು ಮುರಿಯಬೇಡ.


ನನ್ನ ‘ಸ್ವಾಸ್ತ್ಯವಾದ ಜನರು’ ನನಗೊಂದು ಅರಣ್ಯದ ಸಿಂಹದಂತಾಗಿದ್ದಾರೆ. ಅವರು ನನ್ನನ್ನು ಕಂಡು ಗರ್ಜಿಸುತ್ತಾರೆ. ಆದ್ದರಿಂದಲೇ ನಾನು ಅವರಿಗೆ ವಿಮುಖನಾದೆನು.


ಆತನು ತನ್ನ ಜನರ ಮೇಲೆ ಕೋಪಗೊಂಡನು; ಅವರ ವಿಷಯದಲ್ಲಿ ಬೇಸರಗೊಂಡನು!


“ಯೆಹೋವನು ಇದನ್ನು ನೋಡಿ ಕೋಪಗೊಂಡನು. ಆತನ ಮಕ್ಕಳೇ ಆತನನ್ನು ಸಿಟ್ಟಿಗೆಬ್ಬಿಸಿದರು.


ಅವರು ನಿಜವಾಗಿ ಪಾಪಮಾಡಿದ್ದರೂ ಸಹಾಯಕ್ಕಾಗಿ ಅವರು ನನ್ನ ಬಳಿಗೆ ಬಂದರೆ ನಾನು ಅವರಿಗೆ ವಿಮುಖನಾಗುವುದಿಲ್ಲ. ಅವರು ತಮ್ಮ ಶತ್ರುಗಳ ದೇಶದಲ್ಲಿದ್ದರೂ ನಾನು ಅವರಿಗೆ ಕಿವಿಗೊಡುವೆನು. ಅವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ. ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ. ಯಾಕೆಂದರೆ ನಾನೇ ಅವರ ದೇವರಾದ ಯೆಹೋವನು!


ನಾನು ನಿಮ್ಮ ಉನ್ನತವಾದ ಪೂಜಾಸ್ಥಳಗಳನ್ನು ನಾಶಮಾಡುವೆ. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ.


ಅಲ್ಲದೆ ನಾನು ನಿಮ್ಮ ಮಧ್ಯದಲ್ಲಿ ನನ್ನ ಪವಿತ್ರಗುಡಾರವನ್ನು ಇಡುವೆನು. ನಾನು ನಿಮ್ಮಿಂದ ದೂರ ಹೋಗುವುದಿಲ್ಲ.


ನಾನು ಬೇರೊಂದು ರೀತಿಯ ದೀಕ್ಷಾಸ್ನಾನ ಹೊಂದಬೇಕು. ಅದನ್ನು ಹೊಂದುವ ತನಕ ನಾನು ಬಹಳ ತೊಂದರೆಯಲ್ಲಿದ್ದೇನೆ.


ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸುಸಜ್ಜಿತರಾಗಿದ್ದರು. ಆದರೆ ಅವರು ಯುದ್ಧದಿಂದ ಓಡಿಹೋದರು.


ನಿನ್ನನ್ನು ನಂಬದವರು ನಿನ್ನ ಬಳಿಗೆ ಬರಲಾರರು; ದುಷ್ಟರನ್ನು ನೀನು ದ್ವೇಷಿಸುವೆ.


ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’ ಎಂದು ಕರೆಯಲಾಗುವದು. ಏಕೆಂದರೆ ಯೆಹೋವನು ಅವರನ್ನು ಸ್ವಿಕರಿಸಲಿಲ್ಲ.”


ಯಾಕೆಂದರೆ ನಾನು ಅವರ ಹೃದಯಗಳನ್ನು ಪರಿವರ್ತಿಸಬೇಕು. ಅವರು ನನ್ನನ್ನು ತೊರೆದು ಹೊಲಸು ವಿಗ್ರಹಗಳನ್ನು ಪೂಜಿಸಿದರೂ ನಾನು ಅವರನ್ನು ಪ್ರೀತಿಸುತ್ತೇನೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.’ ಇದೇ ನನ್ನ ಉದ್ದೇಶ


ನೀನು ನಿನ್ನ ತಾಯಿಯ ಮಗಳು. ನೀನು ನಿನ್ನ ಗಂಡನನ್ನು ಮತ್ತು ಮಕ್ಕಳನ್ನು ತಿರಸ್ಕರಿಸಿರುವೆ. ನೀನು ನಿನ್ನ ಸಹೋದರಿಯಂತಿರುವೆ. ನೀವು ನಿಮ್ಮ ಗಂಡಂದಿರನ್ನೂ ಮಕ್ಕಳನ್ನೂ ತಿರಸ್ಕರಿಸಿದಿರಿ. ನೀವು ನಿಮ್ಮನ್ನು ಹೆತ್ತವರ ತರಹ ಇದ್ದೀರಿ. ನಿಮ್ಮ ತಾಯಿ ಹಿತ್ತಿಯಳಾಗಿದ್ದಳು. ನಿಮ್ಮ ತಂದೆಯು ಅಮೋರಿಯದವನಾಗಿದ್ದನು.


“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.


ರೆಜೋನನು ಅರಾಮನ್ನು ಆಳಿದನು. ರೆಜೋನನು ಇಸ್ರೇಲಿನ ದ್ವೇಷಿಯಾದ್ದರಿಂದ, ಸೊಲೊಮೋನನ ಜೀವಮಾನದಲ್ಲೆಲ್ಲಾ ಅವನು ಇಸ್ರೇಲಿನ ಶತ್ರುವಾಗಿಯೇ ಮುಂದುವರಿದನು. ರೆಜೋನ್ ಮತ್ತು ಹದದನು ಇಸ್ರೇಲಿಗೆ ಹೆಚ್ಚು ತೊಂದರೆಯನ್ನು ಉಂಟುಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು