ಜೆಕರ್ಯ 12:1 - ಪರಿಶುದ್ದ ಬೈಬಲ್1 ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಆ ಬಳಿಕ ಆತನು ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶಮಂಡಲವನ್ನು ಹರವಿ ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ ಮನುಷ್ಯನೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ, ಅಧ್ಯಾಯವನ್ನು ನೋಡಿ |
ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”
ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.