ಜೆಕರ್ಯ 12:10 - ಪರಿಶುದ್ದ ಬೈಬಲ್10 ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”