ಜೆಕರ್ಯ 12:12 - ಪರಿಶುದ್ದ ಬೈಬಲ್12 ಪ್ರತಿಯೊಂದು ಕುಟುಂಬವೂ ರೋಧಿಸುವದು. ದಾವೀದನ ಕುಲದವರೂ ಗೋಳಾಡುವರು. ಅವರ ಹೆಂಡತಿಯರೂ ಗೋಳಾಡುವರು. ನಾತಾನಿನ ಕುಟುಂಬದವರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೇಶವೆಲ್ಲಾ ಗೋಳಾಡುವುದು, ಒಂದೊಂದು ಕುಟುಂಬವು ಬೇರೆ ಬೇರೆಯಾಗಿ ಗೋಳಾಡುವುದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾಡೆಲ್ಲ ಗೋಳಾಡುವುದು, ಒಂದೊಂದು ಕುಟುಂಬವೂ ಪ್ರತ್ಯೇಕವಾಗಿ ಗೋಳಾಡುವುದು. “ದಾವೀದ ವಂಶದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ; ನಾತಾನ ವಂಶದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದೇಶವೆಲ್ಲಾ ಗೋಳಾಡುವದು, ಒಂದೊಂದು ಕುಟುಂಬವು ಬೇರೆ ಬೇರೆ ಗೋಳಾಡುವದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವುದು. ದಾವೀದನ ಮನೆಯ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಅಧ್ಯಾಯವನ್ನು ನೋಡಿ |
ಅವರು ಸರ್ವಶಕ್ತನಾದ ಯೆಹೋವನ ಆಲಯದಲ್ಲಿದ್ದ ಯಾಜಕರ ಬಳಿಗೂ ಪ್ರವಾದಿಗಳ ಬಳಿಗೂ ಹೋದರು. ಅವರು ಹೀಗೆ ಪ್ರಶ್ನೆ ಕೇಳಿದರು: “ಅನೇಕ ವರ್ಷಗಳಿಂದ ಆಲಯವು ಕೆಡವಲ್ಪಟ್ಟದ್ದಕ್ಕಾಗಿ ನಮ್ಮ ದುಃಖವನ್ನು ತೋರಿಸಿದೆವು. ಪ್ರತೀ ವರ್ಷದ ಐದನೇ ತಿಂಗಳಿನಲ್ಲಿ ಉಪವಾಸಕ್ಕಾಗಿ ಮತ್ತು ರೋದಿಸುವುದಕ್ಕಾಗಿ ನಾವು ಪ್ರತ್ಯೇಕ ಸಮಯವನ್ನು ನೇಮಿಸುತ್ತಿದ್ದೆವು. ನಾವು ಇದನ್ನು ಹೀಗೆಯೇ ಮುಂದುವರಿಸಬೇಕೋ?”
ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.
“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.