ಜೆಕರ್ಯ 12:3 - ಪರಿಶುದ್ದ ಬೈಬಲ್3 ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ದಿನದಂದು ಜೆರುಸಲೇಮನ್ನು ಭಾರಿ ಬಂಡೆಯನ್ನಾಗಿ ಮಾಡುವೆನು. ಅದನ್ನು ಎತ್ತಲು ಯತ್ನಿಸುವವರೆಲ್ಲರಿಗೂ ತೀವ್ರ ಗಾಯವಾಗುವುದು. ವಿಶ್ವದ ರಾಷ್ಟ್ರಗಳು ಅದನ್ನು ಎತ್ತಿಹಾಕಲು ಕೂಡಿಬರುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತಜನಗಳಿಗೂ ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನೆತ್ತುವವರೆಲ್ಲರಿಗೂ ಕಡುಗಾಯವಾಗುವದು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿಹಾಕಲು ಕೂಡಿಬರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆ ದಿವಸದಲ್ಲಿ, ಅವಳ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವಾಗ, ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಚಲಿಸಲಾಗದ ಕಲ್ಲಾಗಿ ಮಾಡುತ್ತೇನೆ. ಅದನ್ನು ತೆಗೆದುಹಾಕಲು ಪ್ರಯತ್ನಿಸುವವರೆಲ್ಲರು ತಮ್ಮನ್ನು ತಾವೇ ಗಾಯಗೊಳಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |
ಆ ಭಯಂಕರವಾದ ವ್ಯಾಧಿಯು ಶತ್ರುಗಳ ಶಿಬಿರದಲ್ಲಿರುವದು. ಅವರ ಬಳಿಯಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ ಮತ್ತು ಕತ್ತೆಗಳೆಲ್ಲಾ ಈ ವ್ಯಾಧಿಯಿಂದ ಸಂಕಟಪಡುವವು. ಆ ಸಮಯದಲ್ಲಿ ಆ ಜನರು ನಿಜವಾಗಿಯೂ ಯೆಹೋವನಿಗೆ ಭಯಪಡುವರು. ಪ್ರತಿಯೊಬ್ಬನೂ ತನ್ನ ನೆರೆಯವನ ಕೈಗಳನ್ನು ಹಿಡಿದುಕೊಳ್ಳುವನು ಮತ್ತು ಆ ನೆರೆಯವರು ಪರಸ್ಪರ ಹೊಡೆದಾಡಿಕೊಳ್ಳುವರು. ಯೆಹೂದವೂ ಜೆರುಸಲೇಮಿನೊಂದಿಗೆ ಕಾದಾಡುವದು. ಎಲ್ಲಾ ಜನಾಂಗಗಳ ಐಶ್ವರ್ಯವನ್ನು ಪಟ್ಟಣದ ಸುತ್ತಲೂ ಶೇಖರಿಸಿಟ್ಟಿರುವಾಗಲೂ ಇದು ಸಂಭವಿಸುವುದು. ಆಗ ಅಲ್ಲಿ ಬಹು ಸಂಖ್ಯೆಯಲ್ಲಿ ಬೆಳ್ಳಿಬಂಗಾರ ಮತ್ತು ಬಟ್ಟೆಗಳ ರಾಶಿ ಇರುವದು.