Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:4 - ಪರಿಶುದ್ದ ಬೈಬಲ್‌

4 ಆದರೆ ಆ ಸಮಯದಲ್ಲಿ ನಾನು ಅವರ ಕುದುರೆಗಳನ್ನು ಬೆಚ್ಚಿಬೀಳುವಂತೆ ಮಾಡುವೆನು. ಅದರ ಸವಾರನು ಭಯಗೊಳ್ಳುವನು. ಶತ್ರುವಿನ ಎಲ್ಲಾ ಕುದುರೆಗಳನ್ನು ನಾನು ಕುರುಡು ಮಾಡುವೆನು. ಆದರೆ ನಾನು ಕಣ್ಣು ತೆರೆದು ಯೆಹೂದ ವಂಶವನ್ನು ಸಂರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಅವರ ಕುದುರೆಗಳೆಲ್ಲ ತಬ್ಬಿಬ್ಬಾಗುವಂತೆ ಮಾಡುವೆನು. ರಾಹುತರನ್ನು ದಿಗ್ಭ್ರಮೆಗೊಳಿಸುವೆನು. ಜುದೇಯ ಮನೆತನವನ್ನು ಕಟಾಕ್ಷಿಸಿ, ಇತರ ರಾಷ್ಟ್ರಗಳ ಕುದುರೆಗಳನ್ನೆಲ್ಲಾ ಕುರುಡಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳಿಗೆ ತಬ್ಬಿಬ್ಬನ್ನು ಉಂಟುಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ದಿನದಲ್ಲಿ, ನಾನು ಅವರ ಕುದುರೆಗಳಿಗೆಲ್ಲಾ ತಬ್ಬಿಬ್ಬನ್ನು ಉಂಟುಮಾಡುವೆನು, ಅದರ ರಾಹುತರನ್ನು ಭ್ರಮೆಗೊಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಕುದುರೆಗಳನ್ನೆಲ್ಲಾ ಕುರುಡು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:4
24 ತಿಳಿವುಗಳ ಹೋಲಿಕೆ  

ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು.


ಯೆಹೋವನು ನಿಮ್ಮನ್ನು ದಿಗ್ಬ್ರಾಂತರನ್ನಾಗಿ ಮಾಡುವನು; ನಿಮ್ಮನ್ನು ಕುರುಡರನ್ನಾಗಿ ಮಾಡಿ ಗಲಿಬಿಲಿ ಮಾಡುವನು.


ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ಮತ್ತೆ ನೆಮ್ಮದಿಯಿಂದ ವಾಸಿಸುವರು.”


ಹಿಂದಿನ ಕಾಲದಲ್ಲಿ ಜನರು ದೇವರನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ದೇವರು ಅದಕ್ಕೆ ಲಕ್ಷ್ಯಕೊಡಲಿಲ್ಲ. ಈಗಲಾದರೋ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವವರು ಪಶ್ಚಾತ್ತಾಪಪಡಬೇಕೆಂದು ಆತನು ಆಜ್ಞಾಪಿಸುತ್ತಾನೆ.


ಜೆರುಸಲೇಮಿನಲ್ಲಿ ಅತೀವ ಗೋಳಾಟದ ಮತ್ತು ದುಃಖದ ಕಾಲ ಬರುವದು. ಅದು ಮೆಗಿದ್ದೋ ತಗ್ಗಿನಲ್ಲಿ ಹದದ್ ರಿಮ್ಮೋನನು ಸತ್ತಾಗ ಜನರು ಗೋಳಾಡಿದ ಸಮಯದಂತೆ ಇರುವದು.


ಇವರು ಶತ್ರುಗಳನ್ನು ಜಯಿಸುವರು. ಸೈನಿಕರು ರಸ್ತೆಯ ಧೂಳಿನ ಮೇಲೆ ಮುನ್ನಡೆದು ಯೆಹೋವನು ಅವರೊಂದಿಗಿರುವದರಿಂದ ಅವರು ಅಶ್ವಾರೂಢನಾಗಿರುವ ಶತ್ರುಸೈನ್ಯವನ್ನು ಸದೆಬಡಿಯುವರು.


ಶತ್ರುಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರೆಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.”


ನನ್ನ ದೇವರೆ, ನನ್ನ ಪ್ರಾರ್ಥನೆಯನ್ನು ಕೇಳು. ನಿನ್ನ ಕಣ್ಣುಗಳನ್ನು ತೆರೆದು ನಮಗಾದ ಎಲ್ಲ ಕೇಡನ್ನು ನೋಡು. ನಿನ್ನ ಹೆಸರುಳ್ಳ ಪಟ್ಟಣದ ಗತಿ ಏನಾಗಿದೆ ನೋಡು. ನಾವು ಒಳ್ಳೆಯ ಜನರೆಂದು ನಾನು ಹೇಳುತ್ತಿಲ್ಲ. ನಾವು ಒಳ್ಳೆಯ ಜನರೆಂದು ಇದೆಲ್ಲವನ್ನು ಕೇಳುತ್ತಿಲ್ಲ. ನೀನು ಕರುಣಾಮಯನಾಗಿರುವುದರಿಂದಲೇ ಇದನ್ನೆಲ್ಲ ಕೇಳುತ್ತಿದ್ದೇನೆ.


ನನ್ನ ಈ ಔತಣದಲ್ಲಿ ಕುದುರೆಗಳ, ರಾಹುತರ, ಶೂರರ ಮತ್ತು ಸೈನಿಕರ ಮಾಂಸವನ್ನು ಬೇಕಾದಷ್ಟು ತಿನ್ನುವಿರಿ.’” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


ನಾನು ನಿನ್ನ ದವಡೆಗೆ ಕೊಕ್ಕೆ ಹಾಕಿ ನಿನ್ನನ್ನು ಸೆರೆಹಿಡಿದುಕೊಂಡು ಬರುವೆನು. ನಿನ್ನೆಲ್ಲಾ ಭೂಸೈನಿಕರನ್ನೂ ನಿನ್ನೆಲ್ಲಾ ಕುದುರೆಗಳನ್ನೂ ನಿನ್ನೆಲ್ಲಾ ರಾಹುತರನ್ನೂ ಬಂಧಿಸಿ ತರುವೆನು. ನಿನ್ನ ಸೈನಿಕರು ಸಮವಸ್ತ್ರಧಾರಿಗಳಾಗಿ ಖೇಡ್ಯಶಿರಸ್ತ್ರಾಣಗಳನ್ನು ತೊಟ್ಟುಕೊಂಡಿರುವಾಗಲೇ ಅವರನ್ನು ಬಂಧಿಸಿ ತರುವೆನು.


ನಾನು ಅವರನ್ನು ರಕ್ಷಿಸುವೆನು. ನಾನು ಅವರನ್ನು ಪುನಃ ಯೆಹೂದಕ್ಕೆ ಕರೆತರುವೆನು. ನಾನು ಅವರನ್ನು ಬೀಳಿಸುವದಿಲ್ಲ. ನಾನು ಅವರನ್ನು ಅಭಿವೃದ್ಧಿಪಡಿಸುತ್ತೇನೆ. ನಾನು ಅವರನ್ನು ಕೀಳುವದಿಲ್ಲ. ಅವರನ್ನು ನೆಟ್ಟು ಬೆಳೆಯುವದಕ್ಕೆ ಅವಕಾಶ ಮಾಡಿಕೊಡುವೆನು.


ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ಅವಮಾನಮಾಡಿ ಬರೆದ ಪತ್ರವನ್ನು ಕೇಳಿಸಿಕೊ!


ಆ ಸಮಯದಲ್ಲಿ ಯೆಹೋವನು ಪರಲೋಕ ಸೈನ್ಯಕ್ಕೆ ಪರಲೋಕದಲ್ಲಿ ನ್ಯಾಯತೀರಿಸುವನು. ಭೂಮಿಯ ಅರಸರನ್ನು ಭೂಮಿಯ ಮೇಲೆ ನ್ಯಾಯವಿಚಾರಣೆಮಾಡುವನು.


“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.


ನಿಮ್ಮನ್ನು ದೃಷ್ಟಿಸಿ ನಿಮ್ಮ ಪ್ರಾರ್ಥನೆಗಳಿಗೆ ಕಿವಿಗೊಡುವೆನು.


ನನ್ನ ದೇವರೇ, ಈ ಸ್ಥಳದಲ್ಲಿ ಪ್ರಾರ್ಥಿಸುವ ನಮ್ಮನ್ನು ವೀಕ್ಷಿಸಿ ನಮ್ಮ ಪ್ರಾರ್ಥನೆಗೆ ಕಿವಿಗೊಡು.


ನಿನ್ನ ಕಣ್ಣುಗಳು ಹಗಲಿರುಳು ಈ ಆಲಯವನ್ನು ದೃಷ್ಟಿಸುತ್ತಲೇ ಇರಲಿ. ನೀನು ನಿನ್ನ ನಾಮವನ್ನು ಇಲ್ಲಿ ಸ್ಥಾಪಿಸುತ್ತೇನೆ ಎಂದು ಹೇಳಿರುವೆ. ನಾನು ಈ ದೇವಾಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವಾಗ ಆಲೈಸು.


ಆ ಬೆಂಕಿಯಂತಿರುವ ಕುದುರೆಗಳು ಮತ್ತು ರಥಗಳು ಎಲೀಷನ ಬಳಿಗೆ ಇಳಿದುಬಂದವು. ಎಲೀಷನು ಯೆಹೋವನನ್ನು ಪ್ರಾರ್ಥಿಸಿ, “ಈ ಜನರನ್ನು ಕುರುಡರನ್ನಾಗಿ ಮಾಡಬೇಕೆಂದು ನಾನು ನಿನ್ನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು. ಆಗ ಯೆಹೋವನು ಎಲೀಷನ ಪ್ರಾರ್ಥನೆಯಂತೆ ಅರಾಮ್ಯರ ಸೇನೆಯು ಕುರುಡರಾಗುವಂತೆ ಮಾಡಿದನು.


ಆಗ ಅರಾಮ್ಯರ ರಾಜನು ಕುದುರೆಗಳನ್ನು, ರಥಗಳನ್ನು ಮತ್ತು ದೊಡ್ಡ ಸೇನೆಯನ್ನು ದೋತಾನಿಗೆ ಕಳುಹಿಸಿದನು. ಅವರು ರಾತ್ರಿಯಲ್ಲಿ ಬಂದು ನಗರವನ್ನು ಸುತ್ತುವರಿದರು.


‘ಅಲ್ಲಿ ನಾನು ಸನ್ಮಾನಿಸಲ್ಪಡುವೆನು’ ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದ್ದರಿಂದ ಈ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಈ ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯವಿಟ್ಟು ಕೇಳು.


ಯೆಹೂದದ ಪ್ರಧಾನರು ತಮ್ಮ ಜನರನ್ನು ಹುರಿದುಂಬಿಸುವರು. ‘ಸೇವಾಧೀಶ್ವರನಾದ ಯೆಹೋವನು ನಿಮ್ಮ ದೇವರು. ಆತನೇ ನಮಗೆ ಬಲವನ್ನು ಕೊಡುವಾತನು’ ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು