Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:5 - ಪರಿಶುದ್ದ ಬೈಬಲ್‌

5 ಯೆಹೂದದ ಪ್ರಧಾನರು ತಮ್ಮ ಜನರನ್ನು ಹುರಿದುಂಬಿಸುವರು. ‘ಸೇವಾಧೀಶ್ವರನಾದ ಯೆಹೋವನು ನಿಮ್ಮ ದೇವರು. ಆತನೇ ನಮಗೆ ಬಲವನ್ನು ಕೊಡುವಾತನು’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೂದದ ಕುಲಪತಿಗಳು ತಮ್ಮ ಮನಸ್ಸಿನೊಳಗೆ, ‘ಯೆರೂಸಲೇಮಿನವರು ತಮ್ಮ ದೇವರಾದ ಸೇನಾಧೀಶ್ವರ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ’ ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಜುದೇಯದ ನಾಯಕರೆಲ್ಲ ತಮ್ಮ ತಮ್ಮೊಳಗೇ: ‘ಜೆರುಸಲೇಮಿನ ನಿವಾಸಿಗಳ ಶಕ್ತಿಸಾಮರ್ಥ್ಯ ಸೇನಾಧೀಶ್ವರ ಸರ್ವೇಶ್ವರನಾದ ದೇವರೇ’ ಎಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೂದದ ಕುಲಪತಿಗಳು ಮನಸ್ಸಿನೊಳಗೆ - ಯೆರೂಸಲೇವಿುನವರು ತಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಯೆಹೂದದ ದೊರೆಗಳು ತಮ್ಮ ಹೃದಯದಲ್ಲಿ ಯೆರೂಸಲೇಮಿನ ನಿವಾಸಿಗಳ ಶಕ್ತಿ ಸಾಮರ್ಥ್ಯ, ತಮ್ಮ ಸೇನಾಧೀಶ್ವರ ಯೆಹೋವ ದೇವರಲ್ಲಿಯೇ ಎಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:5
28 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಜನರನ್ನು ಶಕ್ತಿಶಾಲಿಗಳನ್ನಾಗಿ ಮಾಡುವನು. ಅವರು ಆತನ ನಾಮದ ಘನತೆಗೋಸ್ಕರ ಜೀವಿಸುವರು. ಇದು ಯೆಹೋವನ ನುಡಿ.


ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.


ಆತನೇ, ನನಗೆ ಬಲವನ್ನು ಕೊಡುವನು; ಶುದ್ಧ ಜೀವನವನ್ನು ನಡೆಸಲು ನನಗೆ ಸಹಾಯಮಾಡುವನು.


ಯೆಹೋವನು ನನಗೆ ಬಂಡೆಯಾಗಿದ್ದಾನೆ. ಆತನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಯುದ್ಧಕ್ಕೂ ಕದನಕ್ಕೂ ತರಬೇತು ಮಾಡುವನು.


ದೇವರೇ, ಯುದ್ಧದಲ್ಲಿ ನೀನು ನನ್ನನ್ನು ಬಲಿಷ್ಠನನ್ನಾಗಿ ಮಾಡಿದೆ; ಎಲ್ಲಾ ಶತ್ರುಗಳು ನನ್ನ ಎದುರಿನಲ್ಲಿ ಬೀಳುವಂತೆ ಮಾಡಿದೆ.


ಆತನ ಜನರನ್ನು ಆಳುವ ನ್ಯಾಯಾಧಿಪತಿಗಳಿಗೆ ಯೆಹೋವನು ಜ್ಞಾನವನ್ನು ಕೊಡುವನು. ಪುರದ್ವಾರದಲ್ಲಿ ಯುದ್ಧಮಾಡುವ ಆತನ ಜನರಿಗೆ ಯೆಹೋವನು ಬಲವನ್ನು ಕೊಡುವನು.


ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ಮತ್ತೆ ನೆಮ್ಮದಿಯಿಂದ ವಾಸಿಸುವರು.”


ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರೆದುಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯ ಮಾಡುವೆನು.


ಅವರನ್ನು ತ್ಯಜಿಸಬಹುದೇನೋ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಬಹುದೇನೋ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”


ಅವರಲ್ಲೇ ಒಬ್ಬನು ಅವರಿಗೆ ನಾಯಕನಾಗಿರುವನು. ಆ ನಾಯಕನು ನನ್ನ ಜನರಿಂದಲೇ ಬರುವನು. ನಾನು ಹೇಳಿದರೆ ಮಾತ್ರ ಜನರು ನನ್ನ ಹತ್ತಿರಕ್ಕೆ ಬರಲು ಸಾಧ್ಯ. ಆದ್ದರಿಂದ ನಾನು ಆ ನಾಯಕನನ್ನು ನನ್ನ ಹತ್ತಿರ ಬರಲು ಹೇಳುವೆನು. ಅವನು ನನಗೆ ತುಂಬಾ ಹತ್ತಿರದವನಾಗುವನು.


“ಈಗ ನಿನ್ನಲ್ಲಿ ತಾಮ್ರವಿದೆ. ನಾನು ನಿನಗೆ ಬಂಗಾರವನ್ನು ತರುವೆನು. ಈಗ ನಿನ್ನಲ್ಲಿ ಕಬ್ಬಿಣವಿದೆ. ನಾನು ನಿನಗೆ ಬೆಳ್ಳಿಯನ್ನು ತರುವೆನು. ನಿನ್ನ ಮರವನ್ನು ತಾಮ್ರವನ್ನಾಗಿ ಪರಿವರ್ತಿಸುವೆನು. ನಿನ್ನ ಕಲ್ಲುಬಂಡೆಗಳನ್ನು ಕಬ್ಬಿಣವನ್ನಾಗಿ ಮಾಡುವೆನು. ನಿಮ್ಮ ಶಿಕ್ಷೆಯನ್ನು ಸಮಾಧಾನವನ್ನಾಗಿ ಮಾಡುವೆನು. ಈಗ ನಿನ್ನನ್ನು ಹಿಂಸಿಸುವ ಜನರು ನಿನಗೆ ಸಹಾಯ ಮಾಡುವರು.


ನನ್ನ ಮಾತುಗಳನ್ನು ಕೇಳಿರಿ. ರಾಜ್ಯದಲ್ಲಿ ಧರ್ಮವು ನೆಲೆಗೊಳ್ಳುವಂತೆ ರಾಜನು ರಾಜ್ಯವಾಳಬೇಕು. ಅಧಿಕಾರಿಗಳು ನ್ಯಾಯದಿಂದ ಜನರನ್ನು ನಡೆಸಿಕೊಂಡು ಹೋಗಬೇಕು.


ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)


ಆರಂಭದಲ್ಲಿ ನಿಮಗಿದ್ದಂತಹ ನ್ಯಾಯಾಧೀಶರನ್ನು ನಾನು ತಿರುಗಿ ಬರಮಾಡುವೆನು. ನಿಮ್ಮ ಸಲಹೆಗಾರರು ಹಿಂದಿನ ಕಾಲದ ಸಲಹೆಗಾರರಂತೆ ಇರುವರು. ಆಗ ನೀನು ‘ನ್ಯಾಯವಾದ ಮತ್ತು ನಂಬಿಗಸ್ತಿಕೆಯುಳ್ಳ ಪಟ್ಟಣ’ವೆಂದು ಕರೆಯಲ್ಪಡುವೆ.”


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ಸೊದೋಮಿನ ಅಧಿಪತಿಗಳೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ.


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


“ನನ್ನ ಹೃದಯವು ಇಸ್ರೇಲಿನ ಸೇನಾಧಿಪತಿಗಳ ಸಂಗಡವಿದೆ. ಈ ಸೇನಾಧಿಪತಿಗಳು ಇಸ್ರೇಲಿಗಾಗಿ ಯುದ್ಧಮಾಡಲು ಸ್ವಇಚ್ಛೆಯಿಂದ ಬಂದರು. ಯೆಹೋವನಿಗೆ ಸ್ತೋತ್ರವಾಗಲಿ.


ಆದರೆ ಆ ಸಮಯದಲ್ಲಿ ನಾನು ಅವರ ಕುದುರೆಗಳನ್ನು ಬೆಚ್ಚಿಬೀಳುವಂತೆ ಮಾಡುವೆನು. ಅದರ ಸವಾರನು ಭಯಗೊಳ್ಳುವನು. ಶತ್ರುವಿನ ಎಲ್ಲಾ ಕುದುರೆಗಳನ್ನು ನಾನು ಕುರುಡು ಮಾಡುವೆನು. ಆದರೆ ನಾನು ಕಣ್ಣು ತೆರೆದು ಯೆಹೂದ ವಂಶವನ್ನು ಸಂರಕ್ಷಿಸುವೆನು.


ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನು “ಮಹಿಮಾಪೂರ್ಣವಾದ ಕಿರೀಟ”ವಾಗುವನು. ಉಳಿದಿರುವ ಆತನ ಜನರಿಗೆ ಆತನು “ಅಂದವಾದ ಪುಷ್ಪಕಿರೀಟ”ವಾಗಿರುವನು.


ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು