ಜೆಕರ್ಯ 12:6 - ಪರಿಶುದ್ದ ಬೈಬಲ್6 ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ಮತ್ತೆ ನೆಮ್ಮದಿಯಿಂದ ವಾಸಿಸುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಆ ದಿನದಂದು ಜುದೇಯದ ಕುಲನಾಯಕರನ್ನು ಕಟ್ಟಿಗೆಯ ಮಧ್ಯೆ ಇರುವ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವೆ ಉರಿಯುವ ಪಂಜನ್ನಾಗಿಯೂ ಮಾಡುವೆನು. ಅವರು ಸುತ್ತಮುತ್ತಲಿನ ರಾಷ್ಟ್ರಗಳನ್ನು ಎಡಬಲವೆನ್ನದೆ ನಾಶಮಾಡುವರು. ಜೆರುಸಲೇಮಿನ ನಿವಾಸಿಗಳಾದರೋ ತಮ್ಮ ನಗರದಲ್ಲೇ ಸುರಕ್ಷಿತವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇವಿುನವರು ತಮ್ಮ ಸ್ಥಳವಾದ ಯೆರೂಸಲೇವಿುನಲ್ಲಿಯೇ ಇನ್ನು ವಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಆ ದಿವಸದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ, ಸಿವುಡುಗಳಲ್ಲಿರುವ ಬೆಂಕಿಯ ಪಂಜಿನ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ, ಎಡಗಡೆಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನೂ ನುಂಗಿಬಿಡುವರು. ಆದರೆ ಯೆರೂಸಲೇಮಿನವರು ತಿರುಗಿ ತನ್ನ ಸ್ಥಳದಲ್ಲಿ ಯೆರೂಸಲೇಮಿನಲ್ಲಿಯೇ ಸುರಕ್ಷಿತವಾಗಿ ವಾಸಿಸುವರು. ಅಧ್ಯಾಯವನ್ನು ನೋಡಿ |