ಜೆಕರ್ಯ 12:8 - ಪರಿಶುದ್ದ ಬೈಬಲ್8 ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.
ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.