ಜೆಕರ್ಯ 13:3 - ಪರಿಶುದ್ದ ಬೈಬಲ್3 ಯಾವನಾದರೂ ಪ್ರವಾದಿಸುವದನ್ನು ಮಂದುವರಿಸಿದರೆ ಅವನು ಶಿಕ್ಷೆಗೆ ಗುರಿಯಾಗುವನು. ‘ನೀನು ಯೆಹೋವನ ಹೆಸರಿನಲ್ಲಿ ಸುಳ್ಳನ್ನು ಹೇಳಿರುವೆ. ಆದ್ದರಿಂದ ನೀನು ಸಾಯಲೇಬೇಕು’ ಎಂದು ಅವನ ಸ್ವಂತ ತಂದೆತಾಯಿಗಳು ಅವನಿಗೆ ಹೇಳುವರು. ಅವನ ಸ್ವಂತ ತಂದೆ ತಾಯಿಗಳು ಅವನು ಸುಳ್ಳು ಪ್ರವಾದನೆ ಹೇಳಿದ್ದಕ್ಕೆ ಅವನನ್ನು ಖಡ್ಗದಿಂದ ಕೊಲ್ಲಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯಾವನಾದರೂ ಪ್ರವಾದನೆ ಮಾಡಲು ಯತ್ನಿಸಿದರೆ, ಅವನ ತಾಯಿತಂದೆಗಳೇ, “ಇವನು ಸರ್ವೇಶ್ವರಸ್ವಾಮಿಯ ಹೆಸರೆತ್ತಿ ಸುಳ್ಳಾಡುವುದರಿಂದ ಅವನು ಬದುಕಬಾರದು,” ಎಂದು ಹೇಳುವರು. ಅಷ್ಟೇ ಅಲ್ಲ, ಅವನು ಮಾಡಿದ ಪ್ರವಾದನೆಯ ನಿಮಿತ್ತ ಅವರೇ ಅವನನ್ನು ತಿವಿದು ಕೊಂದುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ - ನೀನುಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತೀ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿವಿುತ್ತ ಅವನನ್ನು ಇರಿದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯಾವನಾದರೂ ಇನ್ನು ಪ್ರವಾದಿಸಿದರೆ, ಅವನ ಹೆತ್ತವರಾದ ತಂದೆತಾಯಿಗಳು ಅವನಿಗೆ, ‘ನೀನು ಬದುಕಬಾರದು, ಏಕೆಂದರೆ ಯೆಹೋವ ದೇವರ ಹೆಸರಿನಲ್ಲಿ ಸುಳ್ಳು ಹೇಳುತ್ತೀ,’ ಎಂದು ಹೇಳುವರು. ಅವನು ಪ್ರವಾದಿಸುವಾಗ ಅವನ ತಂದೆತಾಯಿಗಳು ಅವನನ್ನು ಇರಿದುಬಿಡುವರು. ಅಧ್ಯಾಯವನ್ನು ನೋಡಿ |
ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.