ಜೆಕರ್ಯ 13:4 - ಪರಿಶುದ್ದ ಬೈಬಲ್4 ಆ ಸಮಯದಲ್ಲಿ ಪ್ರವಾದಿಗಳು ತಮ್ಮ ದರ್ಶನ, ಪ್ರವಾದನೆಗಳಿಗಾಗಿ ನಾಚಿಕೊಳ್ಳುವರು. ತಾವು ಪ್ರವಾದಿಗಳೆಂದು ತೋರಿಸಿಕೊಳ್ಳಲು ಧರಿಸುವ ಗಡುಸಾದ ಬಟ್ಟೆಗಳನ್ನು ಧರಿಸಿಕೊಳ್ಳುವದಿಲ್ಲ. ಅವರು ಪ್ರವಾದನೆಗಳೆಂದು ಹೇಳುವ ತಮ್ಮ ಸುಳ್ಳುಗಳಿಂದ ಜನರನ್ನು ಮೋಸಪಡಿಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ದಿನದಲ್ಲಿ ಯಾವ ಪ್ರವಾದಿಯೂ ತನಗಾಗಿರಬಹುದಾದ ದರ್ಶನಗಳನ್ನು ಪ್ರಕಟಿಸಲು ಹೆಮ್ಮೆಪಡುವುದಿಲ್ಲ. ಪ್ರವಾದಿಯಂತೆ ನಟಿಸುವುದಿಲ್ಲ. ಪ್ರವಾದಿಯ ವೇಷವನ್ನು ಧರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಆ ದಿವಸದಲ್ಲಿ, ಪ್ರವಾದಿಗಳು ಪ್ರವಾದಿಸುವಾಗ, ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು. ಅವರು ಮೋಸಗೊಳಿಸಲು ಪ್ರವಾದಿಯ ಒರಟಾದ ವಸ್ತ್ರವನ್ನು ಧರಿಸುವುದಿಲ್ಲ. ಅಧ್ಯಾಯವನ್ನು ನೋಡಿ |