ಜೆಕರ್ಯ 13:7 - ಪರಿಶುದ್ದ ಬೈಬಲ್7 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು. ಅಧ್ಯಾಯವನ್ನು ನೋಡಿ |
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.