ಜೆಕರ್ಯ 13:8 - ಪರಿಶುದ್ದ ಬೈಬಲ್8 ದೇಶದ ಮೂರನೇ ಎರಡು ಪಾಲಷ್ಟು ಜನರು ಗಾಯಗೊಂಡು ಸಾಯುವರು. ಒಂದು ಪಾಲಷ್ಟು ಜನರು ಬದುಕಿ ಉಳಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹತರಾಗುವರು ನಾಡಿನ ಮೂರರಲ್ಲೆರಡು ಭಾಗದವರು, ಮೂರನೆಯ ಭಾಗದವರು ಉಳಿಯುವರಲ್ಲಿ, ಸರ್ವೇಶ್ವರಸ್ವಾಮಿಯ ನುಡಿಯಿದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಹೀಗೆ ಹೇಳುತ್ತಾರೆ, ಸಮಸ್ತ ದೇಶದಲ್ಲಿ ಮೂರರಲ್ಲಿ ಎರಡು ಪಾಲು ಹತರಾಗಿ ನಾಶವಾಗುವರು. ಆದರೆ ಮೂರನೆಯ ಪಾಲು, ಅದರಲ್ಲಿ ಉಳಿಯುವರು. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”