Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:10 - ಪರಿಶುದ್ದ ಬೈಬಲ್‌

10 ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಉತ್ತರದಲ್ಲಿರುವ ಗೆಬದಿಂದ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ನಾಡೆಲ್ಲ ಸಮತಟ್ಟಾಗಿರುವುದು. ಜೆರುಸಲೇಮ್ ನಗರ ಮಾತ್ರ ಸುತ್ತಮುತ್ತಲಿನ ಪ್ರದೇಶಗಳಿಗಿಂತ ಎತ್ತರವಾಗಿ ನಿಲ್ಲುವುದು. ಒಂದು ಕಡೆ ಬೆನ್ಯಾಮಿನ್ ಬಾಗಿಲಿನಿಂದ ಪೂರ್ವಕಾಲದ ಮೂಲೆಯ ಬಾಗಿಲ ತನಕವೂ ಹನನೇಲಿನ ಗೋಪುರದಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತವೂ ಹರಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ದೇಶವು ಗೆಬದಿಂದ ಯೆರೂಸಲೇವಿುಗೆ ತೆಂಕಲಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತ ಇದ್ದ ಕಡೆಯೇ ಎತ್ತರದಲ್ಲಿ ನಿಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:10
28 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ಮತ್ತೆ ನೆಮ್ಮದಿಯಿಂದ ವಾಸಿಸುವರು.”


ಲೆಬಾವೋತ್, ಶಿಲ್ಹೀಮ್, ಆಯಿನ್ ಮತ್ತು ರಿಮ್ಮೋನ್. ಒಟ್ಟಿಗೆ ಇಪ್ಪತ್ತೊಂಭತ್ತು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ಆದರೆ ಯೆರೆಮೀಯನು ಜೆರುಸಲೇಮಿನ ಬೆನ್ಯಾಮೀನ್ ಹೆಬ್ಬಾಗಿಲಿನ ಹತ್ತಿರ ಹೋದಾಗ ಪಹರೆದಾರರ ಮುಖ್ಯಸ್ಥನು ಅವನನ್ನು ಹಿಡಿದುಕೊಂಡನು. ಆ ಮುಖ್ಯಸ್ಥನ ಹೆಸರು ಇರೀಯ. ಇರೀಯನು ಶೆಲೆಮ್ಯನ ಮಗನು; ಶೆಲೆಮ್ಯನು ಹನನ್ಯನ ಮಗನು. ಮುಖ್ಯಸ್ಥನಾದ ಇರೀಯನು ಯೆರೆಮೀಯನನ್ನು ಹಿಡಿದುಕೊಂಡು, “ಯೆರೆಮೀಯನೇ, ನೀನು ಬಾಬಿಲೋನಿನ ಕಡೆ ಸೇರಿಕೊಳ್ಳುವದಕ್ಕಾಗಿ ನಮ್ಮನ್ನು ಬಿಟ್ಟುಹೋಗುತ್ತಿರುವೆ” ಎಂದನು.


ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.


ಆಗ ರಾಜನಾದ ಆಸನು ಯೆಹೂದದ ಜನರಿಗೆಲ್ಲ ಒಂದು ಆಜ್ಞೆಯನ್ನು ಮಾಡಿದನು. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಸಹಾಯಮಾಡಬೇಕಾಯಿತು. ಬಾಷನು ರಾಮ ನಗರವನ್ನು ಬಲಪಡಿಸಲೆಂದು ಉಪಯೋಗಿಸುತ್ತಿದ್ದ ಎಲ್ಲಾ ಕಲ್ಲುಗಳನ್ನು ಮತ್ತು ಮರಗಳನ್ನು ಅವರು ರಾಮಕ್ಕೆ ಹೋಗಿ ತೆಗೆದುಕೊಂಡು ಬಂದರು. ಅವರು ಆ ವಸ್ತುಗಳನ್ನು ಬೆನ್ಯಾಮೀನ್ ದೇಶದ ಗೆಬಕ್ಕೆ ಮತ್ತು ಮಿಚ್ಛೆಗಳಿಗೆ ತೆಗೆದುಕೊಂಡು ಹೋದರು. ನಂತರ ರಾಜನಾದ ಆಸನು ಆ ಪಟ್ಟಣಗಳನ್ನು ಮತ್ತಷ್ಟು ಬಲಪಡಿಸಿದನು.


ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’


ಆ ಅಧಿಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದ್ಮೆಲೆಕನೆಂಬ ಮನುಷ್ಯನ ಕಿವಿಗೆ ಬಿತ್ತು. ಎಬೆದ್ಮೆಲೆಕನು ಇಥಿಯೋಪಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿದ್ಕೀಯನು ಬೆನ್ಯಾಮೀನ್ ಊರ ಬಾಗಲಲ್ಲಿ ಕುಳಿತಿದ್ದನು. ಎಬೆದ್ಮೆಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್ ಊರಹೆಬ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ಕೀಯನ ಹತ್ತಿರ ಬಂದು ಹೀಗೆ ಹೇಳಿದನು:


ಎಲ್ಯಾಷೀಬನು ಮಹಾಯಾಜಕನಾಗಿದ್ದನು. ಅವನೂ ಮತ್ತು ಯಾಜಕರುಗಳಾಗಿದ್ದ ಅವನ ಸಹೋದರರೂ ಕುರಿ ಹೆಬ್ಬಾಗಿಲನ್ನು ಕಟ್ಟಿದರು. ನಂತರ ಪ್ರಾರ್ಥಿಸಿ ಯೆಹೋವನಿಗೆ ಅದನ್ನು ಪ್ರತಿಷ್ಠಿಸಿದರು. ಅವರು ಅದಕ್ಕೆ ಬಾಗಿಲುಗಳನ್ನು ಜೋಡಿಸಿದರು. ಆ ಯಾಜಕರು ನೂರುಗೋಪುರ ಮತ್ತು ಹನನೇಲ್ ಗೋಪುರದವರೆಗೂ ಜೆರುಸಲೇಮಿನ ಗೋಡೆಯನ್ನು ಕಟ್ಟಿದ್ದರು. ಅವರು ಪ್ರಾರ್ಥಿಸಿ ಯೆಹೋವನಿಗೆ ಪ್ರತಿಷ್ಠಿಸಿದರು.


ಆದರೆ ಬೆನ್ಯಾಮೀನ್ಯರ ಆರುನೂರು ಜನರು ತಪ್ಪಿಸಿಕೊಂಡು ಮರುಭೂಮಿಗೆ ಓಡಿಹೋದರು. ಅವರು ರಿಮ್ಮೋನ್ ಗಿರಿ ಎಂಬ ಸ್ಥಳಕ್ಕೆ ಓಡಿಹೋದರು. ಅಲ್ಲಿ ಅವರು ನಾಲ್ಕು ತಿಂಗಳುಗಳವರೆಗೆ ಇದ್ದರು.


ಬೆನ್ಯಾಮೀನ್ಯರ ಸೈನಿಕರು ಹಿಂತಿರುಗಿ ಮರುಭೂಮಿಯ ಕಡೆಗೆ ಓಡಿದರು. ಅವರು ರಿಮ್ಮೋನ್ ಗಿರಿಯ ಕಡೆಗೆ ಓಡಿಹೋದರು. ಆದರೆ ಇಸ್ರೇಲಿ ಸೈನಿಕರು ದಾರಿಯ ಉದ್ದಕ್ಕೂ ಐದು ಸಾವಿರ ಬೆನ್ಯಾಮೀನ್ ಸೈನಿಕರನ್ನು ಕೊಂದುಹಾಕಿದರು. ಅವರು ಬೆನ್ಯಾಮೀನ್ಯರನ್ನು ಬೆನ್ನಟ್ಟುತ್ತಲೇ ಇದ್ದರು. ಅವರನ್ನು ಗಿದೋಮಿನವರೆಗೆ ಬೆನ್ನಟ್ಟಿಕೊಂಡು ಹೋದರು. ಅಲ್ಲಿ ಇಸ್ರೇಲ್ ಸೈನಿಕರು ಇನ್ನೂ ಎರಡು ಸಾವಿರ ಜನ ಬೆನ್ಯಾಮೀನ್ಯರನ್ನು ಕೊಂದುಹಾಕಿದರು.


“ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.


ಸೈನಿಕರು ಮಾಬರ ಎಂಬ ಸ್ಥಳದಲ್ಲಿ ಕಣಿವೆಯನ್ನು ದಾಟುತ್ತಾರೆ. ಗೆಬ ಎಂಬಲ್ಲಿ ಮಲಗುವರು. ಆಗ ರಾಮಾವು ಭಯಪಡುವದು. ಸೌಲನ ಗಿಬೆಯದ ಜನರು ಪಲಾಯನ ಮಾಡುವರು.


ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.


ಆಮೇಲೆ ಅವರು ಎಫ್ರಾಯಿಮನ ದ್ವಾರ, ಹಳೇ ದ್ವಾರ ಮತ್ತು “ಮೀನು” ಎಂಬ ದ್ವಾರ ಇವುಗಳ ಮೇಲೆ ಹಾದುಹೋದರು. ಅವರು ಹನನೇಲ್ ಬುರುಜು ಮತ್ತು “ನೂರು” ಎಂಬ ಬುರುಜುಗಳ ಮೇಲೆ ಹಾದುಹೋಗಿ “ಕುರಿ” ಎಂಬ ದ್ವಾರದವರೆಗೂ ಹೋದರು. ಅವರು “ಕಾವಲು ದ್ವಾರ”ದ ಬಳಿ ನಿಂತರು.


ಯೋವಾಷನು ಬೇತ್ಷೆಮೆಷಿನಲ್ಲಿ ಅಮಚ್ಯನನ್ನು ಹಿಡಿದು ಜೆರುಸಲೇಮಿಗೆ ಕೊಂಡೊಯ್ದನು. ಅಮಚ್ಯನ ತಂದೆ ಯೆಹೋವಾಷನು. ಇವನು ಯೆಹೋವಹಾಜನ ಮಗ. ಯೋವಾಷನು ಜೆರುಸಲೇಮಿನ ಪೌಳಿಗೋಡೆಯಲ್ಲಿ ಆರುನೂರು ಅಡಿ ಗೋಡೆಯನ್ನು ಅಂದರೆ ಎಫ್ರಾಯೀಮ್ ಬಾಗಿಲಿನಿಂದ ಹಿಡಿದು ಮೂಲೆಬಾಗಿಲಿನವರೆಗೆ ಗೋಡೆಯನ್ನು ಕೆಡವಿಹಾಕಿದನು.


ಉಳಿದ ಲೇವಿಯರೆಂದರೆ, ಮೆರಾರೀಕುಲಕ್ಕೆ ಸೇರಿದವರು. ಅವರಿಗೆ ಜೆಬುಲೂನ್ ಕುಲದವರಿಂದ ರಿಮ್ಮೋನೋ ಮತ್ತು ತಾಬೋರ್ ಪಟ್ಟಣಗಳೂ ಅವುಗಳ ಸಮೀಪದಲ್ಲಿದ್ದ ಹೊಲಗಳೂ ದೊರೆತವು.


ಈ ಪಟ್ಟಣಗಳ ಹತ್ತಿರವಿರುವ ಐದು ಹಳ್ಳಿಗಳು ಯಾವುವೆಂದರೆ: ಏಟಾಮ್, ಅಯಿನ್, ರಿಮ್ಮೋನ್, ತೋಕೆನ್ ಮತ್ತು ಆಷಾನ್.


ಇಸ್ರೇಲರು ಬೆನ್ಯಾಮೀನ್ಯರಿಗೆ ಒಂದು ಸಂದೇಶವನ್ನು ಕಳುಹಿಸಿದರು. ಅವರು ಬೆನ್ಯಾಮೀನ್ಯರೊಂದಿಗೆ ಶಾಂತಿಯ ಪ್ರಸ್ತಾಪವನ್ನು ಮಾಡಿದರು. ಬೆನ್ಯಾಮೀನ್ಯರು ರಿಮ್ಮೋನ್‌ಗಿರಿ ಎಂಬ ಸ್ಥಳದಲ್ಲಿದ್ದರು.


ಬೆನ್ಯಾಮೀನ್ ಕುಲದವರಿಗೆ ಸೇರಿದ ನಗರಗಳನ್ನು ಸಹ ಆರೋನನ ಸಂತತಿಯವರಿಗೆ ಕೊಡಲಾಯಿತು. ಅವು ಯಾವುವೆಂದರೆ: ಗಿಬ್ಯೋನ್, ಗೆಬ,


ಇಸ್ರೇಲಿನ ರಾಜನಾದ ಯೋವಾಷನು ಬೇತ್ಷೆಮೆಷಿನಲ್ಲಿ ಯೆಹೂದದ ರಾಜನಾದ ಅಮಚ್ಯನನ್ನು ಸೆರೆಹಿಡಿದನು. ಅಮಚ್ಯನು ಯೆಹೋವಾಷನ ಮಗನೂ ಅಹಜ್ಯನ ಮೊಮ್ಮಗನೂ ಆಗಿದ್ದನು. ಯೋವಾಷನು ಜೆರುಸಲೇಮಿಗೆ ಬಂದು ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೆ ಆರುನೂರು ಅಡಿ ಉದ್ದದ ಗೋಡೆಯನ್ನು ಒಡೆದುಹಾಕಿದನು.


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ದ್ವಾರದಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಉಜ್ಜೀಯನು ಜೆರುಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನಬಾಗಿಲು ಮತ್ತು ಪೌಳಿಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು.


ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.


ಯೆಹೋವನು ಹೇಳುವುದೇನೆಂದರೆ, “ನಾನು ಚೀಯೋನಿಗೆ ಹಿಂದಿರುಗಿ ಬಂದಿದ್ದೇನೆ. ನಾನು ಜೆರುಸಲೇಮಿನಲ್ಲಿ ವಾಸಿಸುತ್ತೇನೆ. ಜೆರುಸಲೇಮ್ ನಂಬಿಗಸ್ತನಗರವೆಂದು ಕರೆಯಲ್ಪಡುವುದು. ಸರ್ವಶಕ್ತನ ಪರ್ವತವು ಪವಿತ್ರ ಪರ್ವತವೆಂದು ಕರೆಯಲ್ಪಡುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು