ಜೆಕರ್ಯ 14:11 - ಪರಿಶುದ್ದ ಬೈಬಲ್11 ಜನರು ಅಲ್ಲಿಗೆ ವಾಸಿಸಲು ಹೋಗುವರು. ಇನ್ನು ಮುಂದೆ ಯಾವ ಶತ್ರುವೂ ಅವರನ್ನು ನಾಶಮಾಡಲು ಬರುವುದಿಲ್ಲ. ಜೆರುಸಲೇಮ್ ಸುರಕ್ಷಿತವಾಗಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪಕ್ಕೆ ತುತ್ತಾಗದೆ ಜನರು ನೆಮ್ಮದಿಯಾಗಿ ನೆಲೆಗೊಂಡಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದರಲ್ಲಿ ಜನರು [ತುಂಬಾ] ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮು ನೆಮ್ಮದಿಯಾಗಿ ನೆಲೆಗೊಂಡಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದರಲ್ಲಿ ಜನರು ವಾಸವಾಗಿರುವರು. ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು. ಆದರೆ ಯೆರೂಸಲೇಮು ಭದ್ರವಾಗಿರುವುದು. ಅಧ್ಯಾಯವನ್ನು ನೋಡಿ |
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.