Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:17 - ಪರಿಶುದ್ದ ಬೈಬಲ್‌

17 ರಾಜನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಭೂಲೋಕದ ಕುಟುಂಬಗಳ ಯಾವ ಜನರಾದರೂ ಜೆರುಸಲೇಮಿಗೆ ಹೋಗದಿದ್ದಲ್ಲಿ ಅವರ ರಾಜ್ಯಗಳಲ್ಲಿ ಮಳೆಗೆರೆಯುವದು ನಿಂತುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜನಾಂಗಗಳಲ್ಲಿ ಯಾರಾದರೂ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸಲು ಬರದೆಹೋದರೆ, ಅವರಿಗೆ ಮಳೆಯೇ ಬರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೆ ಬರುವದಿಲ್ಲವೋ ಅವರಿಗೆ ಮಳೆ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಭೂಮಿಯ ಜನಾಂಗಗಳಲ್ಲಿ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಹೋಗದಿದ್ದರೆ, ಅವರ ಮೇಲೆ ಮಳೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:17
27 ತಿಳಿವುಗಳ ಹೋಲಿಕೆ  

ಭೂಮಿಗೆ ಮಳೆ ಬೀಳುವದಿಲ್ಲ. ಯಾರೂ ಬಿತ್ತನೆಗಾಗಿ ಭೂಮಿಯನ್ನು ಉಳುವದಿಲ್ಲ. ರೈತರು ಎದೆಗುಂದುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.


ನಿನ್ನ ಸೇವೆಮಾಡದ ಯಾವ ರಾಜ್ಯವಾಗಲಿ ನಾಶಮಾಡಲ್ಪಡುವದು. ಹೌದು, ಆ ರಾಜ್ಯಗಳು ಸರ್ವನಾಶವಾಗುವವು.


ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.


ಎಲೀಯನು ಸಹ ನಮ್ಮಂತೆಯೇ ಒಬ್ಬ ಮನುಷ್ಯನಾಗಿದ್ದನು. ಮಳೆ ಬಾರದಂತೆ ಅವನು ಪ್ರಾರ್ಥಿಸಿದಾಗ ಮೂರುವರೆ ವರ್ಷಗಳವರೆಗೆ ಆ ನಾಡಿನಲ್ಲಿ ಮಳೆಯೇ ಬೀಳಲಿಲ್ಲ!


ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಳ್ಳುವನು; ಆಕಾಶವನ್ನು ಮುಚ್ಚಿ ಮಳೆಬೀಳದಂತೆ ಮಾಡುವನು. ಆಗ ಹೊಲದಲ್ಲಿ ಧಾನ್ಯ ಬೆಳೆಯುವುದಿಲ್ಲ. ಆಗ ಆತನು ಕೊಡುವ ಒಳ್ಳೆಯ ದೇಶದಲ್ಲಿಯೇ ಊಟಕ್ಕಿಲ್ಲದೆ ಸಾಯುವಿರಿ.


ಜೆರುಸಲೇಮಿನೊಂದಿಗೆ ಯುದ್ಧಮಾಡಲು ಬಂದವರಲ್ಲಿ ಕೆಲವರು ಸಾಯದೆ ಉಳಿಯುವರು. ಅವರೆಲ್ಲರು ಪ್ರತಿವರ್ಷ ಅರಸನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಜೆರುಸಲೇಮಿಗೆ ಬರುವರು. ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವರು.


“ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದ್ದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”


ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.


“ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ನೀನು ಆಕಾಶದಿಂದ ಮಳೆ ಬೀಳದಂತೆ ತಡೆದಾಗ ನಿನ್ನ ಜನರು ಪಶ್ಚಾತ್ತಾಪಪಟ್ಟು ಈ ದೇವಾಲಯದ ಕಡೆಗೆ ತಿರುಗಿ ನಿನ್ನನ್ನು ಪ್ರಾರ್ಥಿಸಿ ತಮ್ಮ ಪಾಪಗಳನ್ನು ಬಿಟ್ಟುಬಿಟ್ಟರೆ


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.


ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.


ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲೆಲ್ಲಾ ಹರಡಿಕೊಂಡವರು ಈ ವಂಶಗಳವರೇ.


ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.


“ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು.


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ನಾನು ಮಳೆ ಬಾರದಂತೆ ಆಕಾಶವನ್ನು ಮುಚ್ಚಿದರೆ, ಅಥವಾ ಮಿಡತೆಗಳಿಗೆ ದೇಶವನ್ನು ಹಾಳುಮಾಡಲು ಅಪ್ಪಣೆಕೊಟ್ಟರೆ ಅಥವಾ ಜನರಿಗೆ ರೋಗವನ್ನು ಬರಮಾಡಿದರೆ


“ಅವರು ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಆಗ ನೀನು ಅವರ ಭೂಮಿಯ ಮೇಲೆ ಬೀಳುವ ಮಳೆಯನ್ನು ನಿಲ್ಲಿಸುವೆ. ಆಗ ಅವರು ಈ ಸ್ಥಳದ ಕಡೆಗೆ ತಿರುಗಿ ಪ್ರಾರ್ಥಿಸುತ್ತಾ, ನಿನ್ನ ಹೆಸರನ್ನು ಕೊಂಡಾಡುವರು. ನೀನು ಅವರನ್ನು ಬಳಲಿಸುವೆ. ಅವರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಟ್ಟು ಅವುಗಳಿಗೆ ವಿಮುಖರಾಗುತ್ತಾರೆ.


ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಆ ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಈ ಉನ್ನತವಾದ ಈ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿದೆ. ಈ ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು.


ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನ್ನು ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಕೇವಲ ಪಾತ್ರೆಗಳನ್ನು ತೆಗೆದುಕೊಂಡು ಹಿಂದಿರುಗಿ ಬರುತ್ತಾರೆ. ಅವರು ನಾಚಿಕೆಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.


ಆ ಸಮಯದಲ್ಲಿ ಯೆಹೋವನು ಇಡೀ ಭೂಲೋಕದ ಅರಸನಾಗುವನು. ಆತನು ಒಬ್ಬನೇ. ಆತನ ಹೆಸರು ಒಂದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು