ಜೆಕರ್ಯ 14:21 - ಪರಿಶುದ್ದ ಬೈಬಲ್21 ವಾಸ್ತವವಾಗಿ ಜೆರುಸಲೇಮಿನ ಮತ್ತು ಯೆಹೊದದ ಪ್ರತಿಯೊಂದು ಪಾತ್ರೆಯ ಮೇಲೆ, “ಸರ್ವಶಕ್ತನಾದ ಯೆಹೋವನಿಗೆ ಮೀಸಲಾಗಿದೆ” ಎಂದು ಬರೆದಿರುತ್ತದೆ. ಯಜ್ಞಗಳನ್ನರ್ಪಿಸಲು ಬರುವ ಜನರೆಲ್ಲರೂ ಆ ಪಾತ್ರೆಗಳನ್ನು ತೆಗೆದುಕೊಂಡು ಅವುಗಳಲ್ಲಿ ವಿಶೇಷ ಅಡಿಗೆಯನ್ನು ಮಾಡುವರು. ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನ ಆಲಯದೊಳಗೆ ಯಾವ ವರ್ತಕನೂ ವ್ಯಾಪಾರ ನಡೆಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಜೆರುಸಲೇಮಿನಲ್ಲಿಯೂ ಜುದೇಯದಲ್ಲಿಯೂ ಇರುವ ಸಕಲ ಅಡಿಗೆಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಸಮರ್ಪಿತವಾಗಿರುವುವು. ಬಲಿಯನ್ನರ್ಪಿಸಲು ಬರುವವರೆಲ್ಲರೂ ಬಲಿಪಶುವಿನ ಮಾಂಸವನ್ನು ಬೇಯಿಸಲು ಈ ಪಾತ್ರೆಗಳನ್ನು ಬಳಸುವರು. ಆ ದಿನ ಬಂದಾಗ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಯಾವ ವರ್ತಕನೂ ಇರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅಲ್ಲದೆ ಯೆರೂಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಪ್ರತಿಯೊಂದು ಪಾತ್ರೆಯು ಸೇನಾಧೀಶ್ವರ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು. ಆ ದಿವಸದಲ್ಲಿ, ಕಾನಾನ್ಯನು ಸೇನಾಧೀಶ್ವರ ಯೆಹೋವ ದೇವರ ಆಲಯದಲ್ಲಿ ಇನ್ನು ಮೇಲೆ ಇರುವುದೇ ಇಲ್ಲ. ಅಧ್ಯಾಯವನ್ನು ನೋಡಿ |