ಜೆಕರ್ಯ 14:4 - ಪರಿಶುದ್ದ ಬೈಬಲ್4 ಅದೇ ಸಮಯದಲ್ಲಿ ಜೆರುಸಲೇಮಿಗೆ ಪೂರ್ವದಲ್ಲಿರುವ ಆಲೀವ್ ಮರಗಳ ಬೆಟ್ಟದ ಮೇಲೆ ನಿಂತುಕೊಳ್ಳುವನು. ಆ ಬೆಟ್ಟವು ಇಬ್ಭಾಗವಾಗುವದು. ಅದರ ಒಂದು ಭಾಗವು ಉತ್ತರಕ್ಕೆ ಹೋಗುವದು, ಇನ್ನೊಂದು ಭಾಗವು ದಕ್ಷಿಣದ ಕಡೆಗೆ ಹೋಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆರೂಸಲೇವಿುಗೆ ಮೂಡಲಲ್ಲಿ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು ಆ ಗುಡ್ಡವು ಮೂಡಲಿಂದ ಪಡುವಲಿಗೆ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವದು; ಗುಡ್ಡದ ಅರ್ಧಭಾಗವು ಬಡಗಲಿಗೆ, ಅರ್ಧಭಾಗವು ತೆಂಕಲಿಗೆ ಸರಿದುಕೊಳ್ಳುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆ ದಿವಸದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವದಿಕ್ಕಿನಲ್ಲಿರುವ ಓಲಿವ್ ಮರಗಳ ಗುಡ್ಡದ ಮೇಲೆ ನಿಲ್ಲುವುವು. ಆ ಗುಡ್ಡವು, ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವುದು. ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದುಕೊಳ್ಳುವುದು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.