Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:8 - ಪರಿಶುದ್ದ ಬೈಬಲ್‌

8 ಆ ಸಮಯದಲ್ಲಿ ಜೆರುಸಲೇಮಿನಿಂದ ನೀರು ಹರಿಯುತ್ತಲೇ ಇರುವದು. ಆ ನದಿಯು ಇಬ್ಭಾಗವಾಗಿ ಒಂದು ಭಾಗ ಪೂರ್ವಕ್ಕೆ ಹರಿಯುವದು. ಇನ್ನೊಂದು ಭಾಗ ಪಶ್ಚಿಮಕ್ಕೆ ಹರಿದು ಮೆಡಿಟರೇನಿಯನ್ ಸಮುದ್ರವನ್ನು ಸೇರುವದು. ಈ ನದಿಯು ಎಲ್ಲಾ ಕಾಲದಲ್ಲಿಯೂ ಬೇಸಿಗೆ, ಹಿಮಕಾಲವೆನ್ನದೆ ಹರಿಯುತ್ತಲೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇವಿುನೊಳಗಿಂದ ಹೊರಡುವದು; ಅರ್ಧಭಾಗವು ಪೂರ್ವಸಮುದ್ರಕ್ಕೂ ಅರ್ಧಭಾಗವು ಪಶ್ಚಿಮಸಮುದ್ರಕ್ಕೂ ಹರಿಯುವದು; ಬೇಸಿಗೆಕಾಲದಲ್ಲಿಯೂ ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ದಿವಸದಲ್ಲಿ ಆಗುವುದೇನೆಂದರೆ: ಯೆರೂಸಲೇಮಿನೊಳಗಿಂದ ಜೀವವುಳ್ಳ ಪ್ರವಾಹವು ಹೊರಡುವುದು. ಅದರಲ್ಲಿ ಅರ್ಧಭಾಗವು ಪೂರ್ವದ ಉಪ್ಪು ಸಮುದ್ರಕ್ಕೆ ಮತ್ತು ಅರ್ಧಭಾಗವು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೆ ಹರಿಯುತ್ತದೆ. ಅದು ಬೇಸಿಗೆ ಕಾಲದಲ್ಲಿಯೂ, ಚಳಿಗಾಲದಲ್ಲಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:8
18 ತಿಳಿವುಗಳ ಹೋಲಿಕೆ  

ನನ್ನಲ್ಲಿ ನಂಬಿಕೆ ಇಡುವವನ ಹೊಟ್ಟೆಯೊಳಗಿಂದ ಜೀವಕರವಾದ ನೀರಿನ ಹೊಳೆಗಳು ಹರಿಯುತ್ತವೆ. ಪವಿತ್ರ ಗ್ರಂಥವು ತಿಳಿಸುವುದು ಇದನ್ನೇ” ಎಂದು ಗಟ್ಟಿಯಾಗಿ ಹೇಳಿದನು.


ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.


ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಅಕಾಸಿಯ ಕಣಿವೆಗೆ ನೀರನ್ನು ಕೊಡುವದು.


ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು. ಅವರನ್ನು ಒಣ ಬೆಂಗಾಡಿಗೆ ಕಳುಹಿಸುವೆನು. ಅವರಲ್ಲಿ ಕೆಲವರು ಪೂರ್ವದ ಸಮುದ್ರಕ್ಕೆ ಹೋಗುವರು, ಕೆಲವರು ಪಶ್ಚಿಮದ ಸಮುದ್ರಕ್ಕೆ ಹೋಗುವರು. ಅವರು ಭಯಂಕರ ಕೃತ್ಯಗಳನ್ನು ಮಾಡಿದುದರಿಂದ ಸತ್ತು ಕೊಳೆಯುವ ಸ್ಥಿತಿಗೆ ಬರಮಾಡುವೆನು. ಆಗ ಭಯಂಕರ ಹೊಲಸು ವಾಸನೆ ಇರುವದು.”


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು.


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.


ನೀನು ತೋಟದ ಬುಗ್ಗೆಯಂತಿರುವೆ; ಹೊಸ ನೀರಿನ ಬಾವಿಯಂತಿರುವೆ; ಲೆಬನೋನಿನ ಬೆಟ್ಟಗಳಿಂದ ಹರಿದುಬರುತ್ತಿರುವ ನೀರಿನಂತಿರುವೆ.


ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.


ಅದೇ ಸಮಯದಲ್ಲಿ ಜೆರುಸಲೇಮಿಗೆ ಪೂರ್ವದಲ್ಲಿರುವ ಆಲೀವ್ ಮರಗಳ ಬೆಟ್ಟದ ಮೇಲೆ ನಿಂತುಕೊಳ್ಳುವನು. ಆ ಬೆಟ್ಟವು ಇಬ್ಭಾಗವಾಗುವದು. ಅದರ ಒಂದು ಭಾಗವು ಉತ್ತರಕ್ಕೆ ಹೋಗುವದು, ಇನ್ನೊಂದು ಭಾಗವು ದಕ್ಷಿಣದ ಕಡೆಗೆ ಹೋಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು