Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:9 - ಪರಿಶುದ್ದ ಬೈಬಲ್‌

9 ಆ ಸಮಯದಲ್ಲಿ ಯೆಹೋವನು ಇಡೀ ಭೂಲೋಕದ ಅರಸನಾಗುವನು. ಆತನು ಒಬ್ಬನೇ. ಆತನ ಹೆಸರು ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:9
35 ತಿಳಿವುಗಳ ಹೋಲಿಕೆ  

ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಈ ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವರು ಮತ್ತು ಸೇವಿಸುವರು.’


ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು.


“ಇಸ್ರೇಲಿನ ಜನರೇ, ಕಿವಿಗೊಡಿರಿ. ಯೆಹೋವನೇ ನಮ್ಮ ದೇವರು. ದೇವರು ಒಬ್ಬನೇ!


ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.”


ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.


ಯೆಹೋವನೇ, ಪ್ರತಿಯೊಬ್ಬ ವ್ಯಕ್ತಿಯನ್ನು ಸೃಷ್ಟಿಸಿದವನು ನೀನೇ. ಅವರೆಲ್ಲರೂ ಬಂದು ನಿನ್ನನ್ನು ಆರಾಧಿಸಲಿ. ಅವರೆಲ್ಲರೂ ನಿನ್ನ ಹೆಸರನ್ನು ಸನ್ಮಾನಿಸಲಿ.


ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ.


ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.


ಆಗ ಎದೋಮಿನಲ್ಲಿ ಉಳಿದವರು ಮತ್ತು ನನ್ನ ಹೆಸರಿನಿಂದ ಕರೆಯಲ್ಪಟ್ಟ ಜನರು ಸಹಾಯಕ್ಕಾಗಿ ಯೆಹೋವನನ್ನು ನೋಡುವರು.” ಇದು ಯೆಹೋವನ ನುಡಿ. ಆತನು ಅವುಗಳನ್ನು ನೆರವೇರಿಸುವನು.


ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.”


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಆಗ ಇಸ್ರೇಲರನ್ನು ಆಳುವಾತನು ಯೆಹೋವನ ಶಕ್ತಿಯಲ್ಲಿಯೂ ತನ್ನ ದೇವರಾದ ಯೆಹೋವನ ಹೆಸರಿನಲ್ಲಿಯೂ ನಿಂತು ತನ್ನ ಮಂದೆಗೆ ಆಹಾರವನ್ನೀಯುವನು. ಆತನ ಮಹತ್ತು ಭೂಮಿಯ ಕಟ್ಟಕಡೆಗೆ ಪ್ರಸರಿಸುವದರಿಂದ ಅವರು ಸಮಾಧಾನದಿಂದ ವಾಸಿಸುವರು.


ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!


ವಿಜಯಿಗಳು ಚೀಯೋನ್ ಬೆಟ್ಟವನ್ನೇರಿ ಏಸಾವಿನ ಪರ್ವತಗಳಲ್ಲಿ ವಾಸಿಸುವ ಜನರನ್ನಾಳುವರು. ಆಗ ಸಾಮ್ರಾಜ್ಯವು ಯೆಹೋವನಿಗೆ ಸೇರುವುದು.


ಆಗ ಎಲ್ಲಾ ಕಡೆಗಳಲ್ಲಿರುವ ಜನರು ಯೆಹೋವನ ಮಹಿಮೆಯನ್ನು ತಿಳಿದುಕೊಳ್ಳುವರು. ಹೇಗೆ ನೀರು ಸಮುದ್ರಕ್ಕೆ ಹರಿಯುತ್ತದೋ ಹಾಗೆ ಈ ವರ್ತಮಾನವು ಎಲ್ಲಾ ಕಡೆಗೆ ಹಬ್ಬುವದು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.


ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು