ಜೆಕರ್ಯ 2:10 - ಪರಿಶುದ್ದ ಬೈಬಲ್10 ಯೆಹೋವನು ಹೀಗೆನ್ನುತ್ತಾನೆ, “ಚೀಯೋನೇ, ಆನಂದಿಸು, ಯಾಕೆಂದರೆ ನಾನು ಬಂದು ನಿಮ್ಮ ಪಟ್ಟಣದಲ್ಲಿ ವಾಸಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರ ಇಂತೆನ್ನುತ್ತಾರೆ: “ಎಲೈ ಸಿಯೋನ್ ನಗರವೇ, ಸಂತೋಷಪಡು, ಜಯಕಾರ ಮಾಡು; ಇಗೋ, ನಾನೇ ಬಂದು ನಿನ್ನ ಮಧ್ಯೆ ವಾಸಿಸುವೆನು!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನು ಇಂತೆನ್ನುತ್ತಾನೆ - ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಚೀಯೋನ್ ಪುತ್ರಿಯೇ, ಹಾಡಿ ಹರ್ಷಿಸು. ಏಕೆಂದರೆ, ನಾನು ಬರುವೆನು ಮತ್ತು ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.