ಜೆಕರ್ಯ 2:11 - ಪರಿಶುದ್ದ ಬೈಬಲ್11 ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.