Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 2:2 - ಪರಿಶುದ್ದ ಬೈಬಲ್‌

2 “ನೀನು ಎಲ್ಲಿಗೆ ಹೋಗುತ್ತೀ?” ಎಂದು ನಾನು ಅವನನ್ನು ವಿಚಾರಿಸಿದೆನು. “ನಾನು ಜೆರುಸಲೇಮ್ ಎಷ್ಟು ಉದ್ದಗಲವಿದೆಯೆಂದು ಅಳತೆ ಮಾಡಲು ಹೋಗುತ್ತಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಅವನನ್ನು, “ಎಲ್ಲಿಗೆ ಹೋಗುತ್ತಿ?” ಎಂದು ಕೇಳಲು ಅವನು ನನಗೆ, “ಯೆರೂಸಲೇಮಿನ ಅಗಲ, ಉದ್ದ ಎಷ್ಟಿರಬೇಕೆಂದು ಅಳೆದು ನೋಡುವುದಕ್ಕೆ ಹೋಗುತ್ತಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಎಲ್ಲಿಗೆ ಹೋಗುತ್ತಿರುವೆ?” ಎಂದು ನಾನು ಅವನನ್ನು ಕೇಳಿದಾಗ, ಅವನು: “ಜೆರುಸಲೇಮಿನ ಉದ್ದ - ಅಗಲ ಎಷ್ಟಿದೆಯೆಂದು ಅಳೆಯಲು ಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಅವನನ್ನು - ಎಲ್ಲಿಗೆ ಹೋಗುತ್ತೀ ಎಂದು ಕೇಳಲು ಅವನು ನನಗೆ - ಯೆರೂಸಲೇವಿುನ ಅಗಲ ಉದ್ದ ಇಷ್ಟಿಷ್ಟಿರಬೇಕೆಂದು ಅಳೆದು ನೋಡುವದಕ್ಕೆ ಹೋಗುತ್ತೇನೆ ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ನಾನು, “ನೀನು ಎಲ್ಲಿಗೆ ಹೋಗುತ್ತೀ?” ಎಂದೆನು. ಅದಕ್ಕೆ ಆತನು ನನಗೆ, “ಯೆರೂಸಲೇಮನ್ನು ಅಳತೆಮಾಡಿ, ಅದರ ಅಗಲವೆಷ್ಟು? ಅದರ ಉದ್ದವೆಷ್ಟು? ಎಂದು ನೋಡುವುದಕ್ಕೆ ಹೋಗುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 2:2
10 ತಿಳಿವುಗಳ ಹೋಲಿಕೆ  

“ಪವಿತ್ರ ಪ್ರದೇಶ ಭಾಗದ ಪಕ್ಕದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಐದು ಸಾವಿರ ಮೊಳ ಅಗಲದ ಪ್ರದೇಶ ಭಾಗವು ಸಹ ಇರುತ್ತದೆ. ಇಸ್ರೇಲಿನ ಉಳಿದೆಲ್ಲ ಜನರಿಗೂ ಈ ಪ್ರದೇಶ ಭಾಗವು ಪಟ್ಟಣವಾಗಿರುತ್ತದೆ.


ಅಳತೆಯ ನೂಲು ಮೂಲೆಯ ಬಾಗಿಲಿನಿಂದ ಗಾರೇಬ್ ಗುಡ್ಡದ ನೇರವಾಗಿ ನೆಟ್ಟಗೆ ಎಳೆಯಲ್ಪಟ್ಟು ಗೋಯದ ಕಡೆಗೆ ತಿರುಗುವುದು.


ತರುವಾಯ ದಂಡದಂತಿರುವ ಒಂದು ಅಳತೆಯ ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು: “ಹೋಗು, ದೇವರ ಆಲಯವನ್ನೂ ಯಜ್ಞವೇದಿಕೆಯನ್ನೂ ಅಳತೆಮಾಡು; ಮತ್ತು ಅಲ್ಲಿ ಆರಾಧಿಸುವ ಜನರನ್ನು ಲೆಕ್ಕಹಾಕು.


ಆಗ ನಾನು ದೂತನನ್ನು, “ಅವರು ಬುಟ್ಟಿಯನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ?” ಎಂದು ಪ್ರಶ್ನಿಸಿದೆನು.


ಈಗಲಾದರೋ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತಿದ್ದೇನೆ. ಆದರೆ ನಿಮ್ಮಲ್ಲಿ ಒಬ್ಬರಾದರೂ, ‘ನೀನು ಎಲ್ಲಿಗೆ ಹೋಗುತ್ತಿರುವೆ?’ ಎಂದು ನನ್ನನ್ನು ಕೇಳಲಿಲ್ಲ.


ಯೆಹೋವನು ನನ್ನನ್ನು ಅಲ್ಲಿಗೆ ಕರೆತಂದನು. ಅಲ್ಲಿ ಒಬ್ಬನು ತಾಮ್ರದಂತೆ ಹೊಳೆಯುತ್ತಿದ್ದನು. ಅವನ ಕೈಯಲ್ಲಿ ಅಳತೆಯ ನೂಲೂ, ಅಳತೆಯ ಕೋಲೂ ಇದ್ದವು. ಅವನು ದ್ವಾರದ ಬಳಿಯಲ್ಲಿ ನಿಂತಿದ್ದನು.


ಆದ್ದರಿಂದ ಯೆಹೋವನು ಹೀಗೆನ್ನುತ್ತಾನೆ: “ನಾನು ಜೆರುಸಲೇಮಿಗೆ ಹಿಂತಿರುಗಿ ಬರುವೆನು. ಬಂದು ಆಕೆಯನ್ನು ಸಂತೈಸುವೆನು.” ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಜೆರುಸಲೇಮ್ ತಿರುಗಿ ಕಟ್ಟಲ್ಪಡುವದು ಮತ್ತು ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು