ಜೆಕರ್ಯ 2:4 - ಪರಿಶುದ್ದ ಬೈಬಲ್4 ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: ‘ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯೆ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು - ಯೆರೂಸಲೇವಿುನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವದರಿಂದ ಅದು ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಓಡಿಹೋಗಿ ಈ ಯೌವನಸ್ಥನಿಗೆ, ‘ಯೆರೂಸಲೇಮು, ಅದರಲ್ಲಿರುವ ಮನುಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾಗಿರುವುದು. ಯೆರೂಸಲೇಮು ಗೋಡೆ ಇಲ್ಲದ ಊರುಗಳಂತೆ ಇರುವುದು. ಅಧ್ಯಾಯವನ್ನು ನೋಡಿ |
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.