Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 2:7 - ಪರಿಶುದ್ದ ಬೈಬಲ್‌

7 ಚೀಯೋನಿನ ಜನರಾದ ನೀವು ಬಾಬಿಲೋನಿನಲ್ಲಿ ವಾಸಿಸುತ್ತಿದ್ದೀರಿ. ಅಲ್ಲಿಂದ ತಪ್ಪಿಸಿಕೊಂಡು ಬನ್ನಿರಿ. ಆ ನಗರದಿಂದ ಓಡಿಹೋಗಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಲೈ, ಬಾಬೆಲ್ ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಲೈ, ಬಾಬೆಲ್‍ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಚೀಯೋನೇ, ಬನ್ನಿರಿ, ಬಾಬಿಲೋನಿನ ಪುತ್ರಿಯ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 2:7
13 ತಿಳಿವುಗಳ ಹೋಲಿಕೆ  

ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ.


ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು: “ನನ್ನ ಜನರೇ, ನೀವು ಆ ನಗರದಿಂದ ಹೊರಗೆ ಬಂದುಬಿಡಿ. ಆಗ ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗುವುದಿಲ್ಲ; ಅವಳಿಗಾಗುವ ಉಪದ್ರವಗಳು ನಿಮಗೆ ಸಂಭವಿಸುವುದಿಲ್ಲ.


ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, “ಈ ದುಷ್ಟ ಸಂತತಿಯಿಂದ ತಪ್ಪಿಸಿಕೊಳ್ಳಿ” ಎಂದು ಬೇಡಿಕೊಂಡನು.


ಬಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಬಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದೇವರು ಬಾಬಿಲೋನಿನ ಜನರನ್ನು ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನ್ನು ಪಡೆಯುವುದು.


ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


ಅವರು ನಗರದ ಹೊರಕ್ಕೆ ಬಂದ ಮೇಲೆ ಆ ಪುರುಷರಲ್ಲಿ ಒಬ್ಬನು, “ಈಗ ಓಡಿಹೋಗಿ ನಿಮ್ಮ ಪ್ರಾಣವನ್ನು ಕಾಪಾಡಿಕೊಳ್ಳಿ; ನಗರದ ಕಡೆಗೆ ತಿರುಗಿ ನೋಡಬೇಡಿ; ಕಣಿವೆಯ ಯಾವ ಸ್ಥಳದಲ್ಲೂ ನಿಂತುಕೊಳ್ಳಬೇಡಿ; ತಪ್ಪಿಸಿಕೊಂಡು ಬೆಟ್ಟಗಳಿಗೆ ಓಡಿಹೋಗಿರಿ; ಇಲ್ಲವಾದರೆ, ಈ ನಗರದೊಡನೆ ನೀವೂ ನಾಶವಾಗುವಿರಿ” ಎಂದು ಹೇಳಿದನು.


ಚೀಯೋನ್ ಕುಮಾರಿಯೇ, ಪ್ರಸವವೇದನೆಯಲ್ಲಿರುವ ಸ್ತ್ರೀಯಂತೆ ನೀನು ನೋವನ್ನು ಅನುಭವಿಸು. ನೀನು ಜೆರುಸಲೇಮ್ ಪಟ್ಟಣದಿಂದ ಹೊರಗೆ ಹೋಗಿ ಹೊಲದಲ್ಲಿ ವಾಸಿಸುವೆ. ನಾನು ಹೇಳುವುದೇನೆಂದರೆ, ನೀನು ಬಾಬಿಲೋನಿಗೆ ಹೋಗುವೆ, ಆದರೆ ಅಲ್ಲಿ ನೀನು ರಕ್ಷಿಸಲ್ಪಡುವೆ. ಯೆಹೋವನು ಅಲ್ಲಿಗೆ ಬಂದು ನಿನ್ನನ್ನು ರಕ್ಷಿಸುವನು. ನಿನ್ನ ವೈರಿಗಳಿಂದ ನಿನ್ನನ್ನು ಬಿಡುಗಡೆ ಮಾಡುವನು.


ನನ್ನ ಜನರೇ, ಬಾಬಿಲೋನ್ ನಗರದಿಂದ ಹೊರಗೆ ಬನ್ನಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಲು ಓಡಿಹೋಗಿರಿ. ಯೆಹೋವನ ಭಯಂಕರ ಕೋಪದಿಂದ ತಪ್ಪಿಸಿಕೊಳ್ಳಲು ಓಡಿಹೋಗಿರಿ.


“ಬಾಬಿಲೋನಿನಿಂದ ಓಡಿಹೋಗಿರಿ. ಬಾಬಿಲೋನಿನ ಪ್ರದೇಶವನ್ನು ಬಿಟ್ಟುಬಿಡಿ. ಕುರಿಮಂದೆಯ ಮುಂದೆ ಹೋಗುವ ಹೋತದಂತೆ ಹೋಗಿರಿ.


ನಿನ್ನ ಧೂಳನ್ನು ಝಾಡಿಸು. ನಿನ್ನ ಮನೋಹರವಾದ ವಸ್ತ್ರಗಳನ್ನು ಧರಿಸಿಕೊ. ಚೀಯೋನಿನ ಕುಮಾರ್ತೆಯಾದ ಜೆರುಸಲೇಮೇ, ನೀನು ಒಮ್ಮೆ ಸೆರೆಯಾಳಾಗಿದ್ದೆ. ಈಗ ನೀನು ನಿನ್ನ ಕುತ್ತಿಗೆಗೆ ಬಂಧಿಸಲ್ಪಟ್ಟ ಸಂಕೋಲೆಗಳಿಂದ ಬಿಡಿಸಿಕೊ.


ನಾಶವಾಗುತ್ತಿರುವ ಜನರ ಗೋಳಾಟವನ್ನು ಕೇಳಿದ ಇಸ್ರೇಲ್ ಜನರು, “ಭೂಮಿಯು ನಮ್ಮನ್ನೂ ನುಂಗಿಬಿಡುತ್ತದೆ!” ಎಂದುಕೊಂಡು ನಾನಾ ದಿಕ್ಕುಗಳಿಗೆ ಓಡಿಹೋದರು.


ಮೋಶೆಯು ಜನರನ್ನು ಎಚ್ಚರಿಸಿ, “ಈ ಕೆಟ್ಟ ಜನರ ಗುಡಾರಗಳಿಂದ ಹೊರಟುಹೋಗಿರಿ. ಇವರ ಸ್ವತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು. ಇಲ್ಲವಾದರೆ ಅವರ ಪಾಪಗಳ ದೆಸೆಯಿಂದ ನೀವೂ ನಾಶವಾಗುವಿರಿ” ಎಂದು ಹೇಳಿದನು.


“ಕನ್ನಿಕೆಯೇ, ಬಾಬಿಲೋನಿನ ಕುಮಾರಿಯೇ ಕೆಳಕ್ಕಿಳಿದು ಧೂಳಿನ ಮೇಲೆ ಕುಳಿತಿಕೊ. ಕಸ್ದೀಯರ ಕುಮಾರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೊ! ಈಗ ನೀನು ಯಜಮಾನಿಯಲ್ಲ. ನೀನು ಕೋಮಲವಾದ ತರುಣಿ ಎಂದು ಜನರು ನಿನ್ನ ಬಗ್ಗೆ ಹೇಳುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು