ಜೆಕರ್ಯ 3:10 - ಪರಿಶುದ್ದ ಬೈಬಲ್10 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಆ ದಿವಸಗಳಲ್ಲಿ ಜನರು ತಮ್ಮ ಸ್ನೇಹಿತರೊಂದಿಗೆ ಕುಳಿತುಕೊಂಡು ಸಂಭಾಷಿಸುವರು. ಅಂಜೂರದ ಮರದ ನೆರಳಿನಲ್ಲಿಯೂ ದ್ರಾಕ್ಷಿತೋಟಗಳ ನೆರಳಿನಲ್ಲಿಯೂ ಕುಳಿತುಕೊಂಡು ಮಾತನಾಡಲು ಪರಸ್ಪರ ಆಮಂತ್ರಿಸುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ದಿನದಂದು ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆಗಳ ಹಾಗೂ ಅಂಜೂರದ ಗಿಡಗಳ ನೆರಳಿನಲ್ಲಿ ಸಮಾಧಾನದಿಂದ ವಿಶ್ರಮಿಸಲು ಕರೆಯುವಿರಿ. ಇದು ಸೇನಾಧಿಶ್ವರ ಸರ್ವೇಶ್ವರಸ್ವಾಮಿಯ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನೀವೆಲ್ಲರು ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿಗೆ ಕರೆಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ ‘ಆ ದಿವಸದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷಿಬಳ್ಳಿಯ ಕೆಳಗೂ, ಅಂಜೂರದ ಮರದ ಕೆಳಗೂ ಕರೆಯುವಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |
“‘ಹಿಜ್ಕೀಯನ ಮಾತುಗಳನ್ನು ಕೇಳಬೇಡಿ. ಅಶ್ಶೂರದ ಅರಸನ ಮಾತುಗಳಿಗೆ ಕಿವಿಗೊಡಿರಿ. ಅವನು ಹೇಳುವುದೇನೆಂದರೆ: “ನೀವು ನನ್ನೊಡನೆ ಒಪ್ಪಂದ ಮಾಡಿಕೊಂಡು ನಿಮ್ಮ ನಗರದಿಂದ ಹೊರಗೆ ಬಂದು ನನ್ನನ್ನು ಸಂಧಿಸಬೇಕು. ಆಗ ನೀವೆಲ್ಲರೂ ನಿಮ್ಮ ಮನೆಗಳಿಗೆ ಹೋಗಬಹುದು; ನಿಮ್ಮ ಸ್ವಂತ ದ್ರಾಕ್ಷಿತೋಟದ ದ್ರಾಕ್ಷಿಹಣ್ಣುಗಳನ್ನು ತಿನ್ನಬಹುದು; ಅಂಜೂರದ ಮರದ ಹಣ್ಣನ್ನು ತಿನ್ನಬಹುದು ನೀವೆಲ್ಲರೂ ನಿಮ್ಮ ಬಾವಿಯ ನೀರನ್ನು ಕುಡಿಯಬಹುದು.