Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:2 - ಪರಿಶುದ್ದ ಬೈಬಲ್‌

2 ಆಗ ಯೆಹೋವನ ದೂತನು ಹೇಳಿದ್ದೇನೆಂದರೆ, “ಯೆಹೋವನು ನಿನ್ನನ್ನು ಖಂಡಿಸಲಿ ಮತ್ತು ಟೀಕೆ ಮಾಡಲಿ. ಯೆಹೋವನು ತನ್ನ ವಿಶೇಷ ನಗರವನ್ನಾಗಿ ಜೆರುಸಲೇಮನ್ನು ಆರಿಸಿಕೊಂಡಿದ್ದಾನೆ. ಆ ನಗರವನ್ನು ಆತನೇ ಕಾಪಾಡಿದನು. ಬೆಂಕಿಯಿಂದ ಎಳೆದುತೆಗೆದ ಕೊಳ್ಳಿಯಂತೆ ಆತನು ಅದನ್ನು ಕಾಪಾಡಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಸರ್ವೇಶ್ವರಸ್ವಾಮಿಯ ದೂತನು ಸೈತಾನನಿಗೆ: “ಸೈತಾನನೇ, ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಜೆರುಸಲೇಮನ್ನು ಆರಿಸಿಕೊಂಡ ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಈತ ಒಲೆಯಂತೆ ಹಿರಿದ ಬೆಂಕಿಕೊಳ್ಳಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಯೆಹೋವನ ದೂತನು ಸೈತಾನನಿಗೆ - ಸೈತಾನನೇ, ಯೆಹೋವನು ನಿನ್ನನ್ನು ಖಂಡಿಸಲಿ, ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರ ದೂತನು ಸೈತಾನನಿಗೆ, “ಸೈತಾನನೇ, ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಯೆರೂಸಲೇಮನ್ನು ಆಯ್ದುಕೊಂಡ ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಅದು ಬೆಂಕಿಯೊಳಗಿಂದ ಎಳೆದ ಕೊಳ್ಳಿಯಾಗಿದೆಯಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:2
22 ತಿಳಿವುಗಳ ಹೋಲಿಕೆ  

“ಸೊದೋಮ್ ಗೊಮೋರವನ್ನು ನಾಶಮಾಡಿದಂತೆ ನಾನು ನಿಮ್ಮನ್ನು ನಾಶಮಾಡಿದೆನು. ಆ ನಗರಗಳು ಸಂಪೂರ್ಣವಾಗಿ ನಾಶವಾದವು. ನೀವು ಬೆಂಕಿಯಿಂದ ಎಳೆದ ಕೊಳ್ಳಿಯಂತಿದ್ದೀರಿ. ಆದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಇತರ ಜನರನ್ನು ರಕ್ಷಿಸಿ. ಆ ಜನರನ್ನು ಬೆಂಕಿಯಿಂದ ಹೊರಕ್ಕೆ ತನ್ನಿರಿ. ನೀವು ಕೆಲವು ಜನರಿಗೆ ಕರುಣೆ ತೋರುವಾಗ ಎಚ್ಚರದಿಂದಿರಿ. ಪಾಪಗಳಿಂದ ಹೊಲಸಾಗಿರುವ ಅವರ ಬಟ್ಟೆಗಳನ್ನು ಸಹ ದ್ವೇಷಿಸಿರಿ.


ಪ್ರಧಾನ ದೇವದೂತನಾದ ಮಿಕಾಯೇಲನೂ ಸಹ ಹೀಗೆ ಮಾಡಲಿಲ್ಲ. ಮೋಶೆಯ ದೇಹವು ಯಾರಿಗೆ ಸೇರಬೇಕೆಂಬುದರ ಬಗ್ಗೆ ಮಿಕಾಯೇಲನು ಸೈತಾನನ ಬಗ್ಗೆ ದೂಷಣೆ ಮಾಡಲು ಧೈರ್ಯಗೊಳ್ಳದೆ, “ಪ್ರಭುವು ನಿನ್ನನ್ನು ದಂಡಿಸುತ್ತಾನೆ” ಎಂದು ಹೇಳಿದನು.


ದೇವರು ಆರಿಸಿಕೊಂಡಿರುವ ಜನರ ಮೇಲೆ ಯಾರು ದೋಷಾರೋಪಣೆ ಮಾಡಬಲ್ಲರು? ಯಾರೂ ಇಲ್ಲ! ಅವರನ್ನು ನೀತಿವಂತರನ್ನಾಗಿ ಮಾಡುವಾತನು ದೇವರೇ.


ಆಗ ದೂತನು: “ಈ ವಿಷಯವನ್ನು ಜನರಿಗೆ ತಿಳಿಸು, ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: ‘ನನ್ನ ಪಟ್ಟಣಗಳು ತಿರುಗಿ ಐಶ್ವರ್ಯದಿಂದ ತುಂಬುವವು. ಚೀಯೋನನ್ನು ನಾನು ಸಂತೈಸುವೆನು. ನಾನು ಜೆರುಸಲೇಮನ್ನು ನನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವೆನು’” ಎಂದನು.


ಯೆಹೋವನು ತಿರುಗಿ ಜೆರುಸಲೇಮನ್ನು ತನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವನು. ಯೆಹೂದವು ಆ ಪವಿತ್ರ ದೇಶದಲ್ಲಿರುವ ಆತನ ಪಾಲು.


ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.


ಶಾಂತಿಯನ್ನು ಕೊಡುವ ದೇವರು ಬೇಗನೆ ಸೈತಾನನನ್ನು ಸೋಲಿಸಿ, ಅವನ ಮೇಲೆ ನಿಮಗೆ ಅಧಿಕಾರವನ್ನು ಕೊಡುವನು. ನಮ್ಮ ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.


ನಿನ್ನ ನಂಬಿಕೆಯು ಕುಂದಿಹೋಗಬಾರದೆಂದು ನಾನು ಪ್ರಾರ್ಥಿಸಿದೆನು! ನೀನು ಪರಿವರ್ತನೆಗೊಂಡ ನಂತರ ನಿನ್ನ ಸಹೋದರರನ್ನು ಬಲಪಡಿಸು” ಎಂದು ಹೇಳಿದನು.


ಆದರೆ ಯೇಸು ಆ ದೆವ್ವಕ್ಕೆ, “ಸುಮ್ಮನಿರು! ಇವನನ್ನು ಬಿಟ್ಟು ಹೊರಗೆ ಬಾ!” ಎಂದು ಆಜ್ಞಾಪಿಸಿದನು. ದೆವ್ವವು ಅವನನ್ನು ಜನರೆಲ್ಲರ ಎದುರಿನಲ್ಲಿಯೇ ಕೆಡವಿ ಯಾವ ಕೇಡೂ ಮಾಡದೆ ಬಿಟ್ಟು ಹೋಯಿತು.


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ಯಾಕೆಂದರೆ, ಆತನು ಅಸಹಾಯಕರ ಬಲಗಡೆಯಲ್ಲಿ ನಿಂತುಕೊಳ್ಳುವನು; ಮರಣದಂಡನೆ ವಿಧಿಸಬೇಕೆಂದಿರುವ ಜನರಿಂದ ಅವರನ್ನು ರಕ್ಷಿಸುವನು.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಯೇಸು, “ಸುಮ್ಮನಿರು! ಅವನೊಳಗಿಂದ ಹೊರಗೆ ಬಾ!” ಎಂದು ಆಜ್ಞಾಪಿಸಿದನು.


ಆದರೆ ಈಗ ನಾನು ನನ್ನ ಹೆಸರನ್ನು ಸ್ಥಾಪಿಸಲು ಜೆರುಸಲೇಮನ್ನು ಆರಿಸಿಕೊಂಡಿದ್ದೇನೆ; ದಾವೀದನನ್ನು ನನ್ನ ಜನರ ನಾಯಕನನ್ನಾಗಿ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.


ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು.


ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ, “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.


“ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರತೆಯಿಂದಿರು. ಭಯಪಡಬೇಡ. ರೆಚೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾಡುತ್ತಿದ್ದಾರೆ. ರೆಚೀನ್, ಅರಾಮ್ ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ.


‘ಈಜಿಪ್ಟಿನಿಂದ ನನ್ನ ಜನರನ್ನು ಬಿಡಿಸಿ ಹೊರ ತಂದಂದಿನಿಂದ ನನ್ನ ಆಲಯಕೋಸ್ಕರ ಇಸ್ರೇಲರ ಕುಲಗಳ ಯಾವ ಪಟ್ಟಣವನ್ನೂ ನಾನು ಆರಿಸಿಕೊಳ್ಳಲಿಲ್ಲ. ಇಸ್ರೇಲರನ್ನು ನಡಿಸುವುದಕ್ಕಾಗಿ ಒಬ್ಬ ನಾಯಕನನ್ನೂ ನಾನು ಆರಿಸಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು