ಜೆಕರ್ಯ 3:4 - ಪರಿಶುದ್ದ ಬೈಬಲ್4 ಆಗ ಆ ದೂತನು ಪಕ್ಕದಲ್ಲಿ ನಿಂತಿದ್ದ ಬೇರೆ ದೂತರನ್ನುದ್ದೇಶಿಸಿ, “ಯೆಹೋಶುವನ ಮೇಲಿರುವ ಮೈಲಿಗೆ ವಸ್ತ್ರವನ್ನು ತೆಗೆಯಿರಿ” ಎಂದು ಹೇಳಿದನು. ಆಗ ದೂತನು ಯೆಹೋಶುವನಿಗೆ, “ನಾನು ನಿನ್ನ ದೋಷಗಳನ್ನು ತೊಳೆದುಬಿಟ್ಟಿರುವೆ. ಈಗ ನಾನು ನಿನಗೆ ಹೊಸ ಬಟ್ಟೆಗಳನ್ನು ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತನ್ನ ಮುಂದೆ ನಿಂತಿದ್ದ ಸೇವಕರಿಗೆ ಆ ದೂತನು, “ಈತನ ಮಲಿನವಾದ ಬಟ್ಟೆಗಳನ್ನು ತೆಗೆದುಬಿಡಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ದೋಷವನ್ನು ತೊಲಗಿಸಿದ್ದೇನೆ. ಶ್ರೇಷ್ಠವಾದ ಬಟ್ಟೆಗಳನ್ನು ನಿನಗೆ ತೊಡಿಸುವೆನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದೇವದೂತನು ತನ್ನ ಸೇವಕರಿಗೆ - ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ ಎಂದು ಅಪ್ಪಣೆಕೊಟ್ಟು ಅವನಿಗೆ - ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರಗಳನ್ನು ತೊಡಿಸುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ದೇವದೂತನು ತನ್ನ ಮುಂದೆ ನಿಂತವರಿಗೆ, “ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದುಹಾಕಿರಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ಪಾಪವನ್ನು ತೆಗೆದುಹಾಕಿದ್ದೇನೆ. ಬದಲಾಗಿ ಶ್ರೇಷ್ಠ ವಸ್ತ್ರಗಳನ್ನು ನಿನಗೆ ತೊಡಿಸುವೆನು,” ಎಂದನು. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”