ಜೆಕರ್ಯ 3:7 - ಪರಿಶುದ್ದ ಬೈಬಲ್7 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಹೇಳುವ ರೀತಿಯಲ್ಲಿ ಜೀವಿಸು. ನಾನು ಹೇಳುವ ರೀತಿಯಲ್ಲಿ ನಡೆ. ನೀನು ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ಅಂಕಣಗಳನ್ನು ನೀನು ನೋಡಿಕೊಳ್ಳುವೆ. ಇಲ್ಲಿ ನಿಂತಿರುವವರೊಂದಿಗೆ ನೀನು ಪ್ರವೇಶಿಸಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನೀನು ನನ್ನ ಮಾರ್ಗದಲ್ಲಿ ನಡೆದು, ನಾನು ನಿನಗೆ ವಹಿಸಿದ ಕಾರ್ಯವನ್ನು ನೆರವೇರಿಸಿದರೆ, ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ವ್ಯಾಪ್ತಿಯಲ್ಲಿ ಉಳ್ಳ ಎಲ್ಲದಕ್ಕೂ ವ್ಯವಸ್ಥಾಪಕನಾಗುವೆ. ಈ ಸನ್ನಿಧಾನದ ದೂತರ ಮಧ್ಯೆ ಬಂದುಹೋಗುವ ಹಕ್ಕನ್ನು ನಿನಗೆ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನ ಮಾರ್ಗಗಳಲ್ಲಿ ನಡೆದು ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವಿ; ಈ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಗಳನ್ನು ಕೈಗೊಂಡರೆ, ಆಗ ನೀನು ನನ್ನ ಆಲಯಕ್ಕೂ ನ್ಯಾಯತೀರಿಸಿ, ನನ್ನ ಅಂಗಳಗಳನ್ನೂ ಕಾಯುವೆ. ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ಹಕ್ಕನ್ನು ನಿನಗೆ ಕೊಡುವೆನು.’ ಅಧ್ಯಾಯವನ್ನು ನೋಡಿ |