ಜೆಕರ್ಯ 4:10 - ಪರಿಶುದ್ದ ಬೈಬಲ್10 ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ದೂತನು, “ಈ ಸ್ತಂಭದಲ್ಲಿರುವ ಏಳು ದೀಪಗಳು ಭೂಲೋಕದ ಎಲ್ಲಾ ಭಾಗಗಳನ್ನು ವೀಕ್ಷಿಸುವ ಸರ್ವೇಶ್ವರಸ್ವಾಮಿಯ ಏಳು ಕಣ್ಣುಗಳನ್ನು ಸೂಚಿಸುತ್ತವೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಈ [ದೀಪಗಳಿಂದ ಸೂಚಿತವಾದ] ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವದನ್ನು ಸಂತೋಷದಿಂದ ನೋಡುತ್ತವೆ; ಹೀಗಿರುವಲ್ಲಿ ಅಲ್ಪಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಆ ಏಳು ದೀಪಗಳು ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಯೆಹೋವ ದೇವರ ಕಣ್ಣುಗಳು. ಜನರು ನೂಲುಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುವರು. ಹೀಗಿರುವುದರಿಂದ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?” ಅಧ್ಯಾಯವನ್ನು ನೋಡಿ |