Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:12 - ಪರಿಶುದ್ದ ಬೈಬಲ್‌

12 ತಿರಿಗಿ ನಾನು ಅವನಿಗೆ, “ನಾನು ಆ ಎರಡು ಬಂಗಾರದ ನಳಿಗೆಯ ಬದಿಯಲ್ಲಿ ಆಲೀವ್ ಮರದ ಎರಡು ಕೊಂಬೆಗಳನ್ನು ನೋಡಿದೆನು. ಅದರಿಂದ ಬಂಗಾರದ ಬಣ್ಣದ ಎಣ್ಣೆಯು ಹರಿಯುತ್ತಿತ್ತು. ಇವುಗಳ ಅರ್ಥವೇನು?” ಎಂದು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮತ್ತೆ ನಾನು ಅವನಿಗೆ, ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ. ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು? ಎಂದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 (ಮತ್ತೆ ಅವನನ್ನು - “ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ; ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು?” ಎಂದು ಕೇಳಿದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತೆ ಅವನನ್ನು - ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ; ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು ಎಂದು ವಿಚಾರಿಸಿದ್ದಕ್ಕೆ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪುನಃ ನಾನು ಅವನಿಗೆ, “ಎರಡು ಚಿನ್ನದ ನಾಳಗಳಿಂದ ಚಿನ್ನದ ಎಣ್ಣೆಯನ್ನು ತಮ್ಮೊಳಗಿಂದ ಸುರಿಸುವ, ಈ ಎರಡು ಹಿಪ್ಪೆಕೊಂಬೆಗಳು ಏನು?” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:12
5 ತಿಳಿವುಗಳ ಹೋಲಿಕೆ  

ಭೂಲೋಕದ ಪ್ರಭುವಿನ ಸನ್ನಿಧಿಯಲ್ಲಿ ನಿಂತಿರುವ ಎರಡು ಆಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳೇ ಈ ಇಬ್ಬರು ಸಾಕ್ಷಿಗಳು.


ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು.


ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:


ಆಗ ಜೆಕರ್ಯನಾದ ನಾನು ಅವನಿಗೆ ಹೇಳಿದ್ದೇನೆಂದರೆ, “ನಾನು ದೀಪಸ್ತಂಭದ ಬಲಗಡೆಯಲ್ಲಿ ಒಂದು ಆಲೀವ್ ಮರವನ್ನೂ ಎಡಗಡೆಯಲ್ಲಿ ಇನ್ನೊಂದು ಆಲೀವ್ ಮರವನ್ನೂ ನೋಡಿದೆನು. ಇವುಗಳು ಏನನ್ನು ಸೂಚಿಸುತ್ತವೆ?” ಎಂದು ಕೇಳಿದೆನು.


ಆಗ ದೇವದೂತನು ಹೇಳಿದ್ದೇನೆಂದರೆ, “ಇವು ಏನನ್ನು ಸೂಚಿಸುತ್ತವೆ ಎಂದು ನಿನಗೆ ತಿಳಿಯದೋ?” ಅದಕ್ಕೆ ನಾನು, “ಇಲ್ಲ” ಅಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು